ಉಡುಪಿ, ಜೂನ್ 28: ಸರ್ಕಾರಿ ಬಸ್ ಕೊರತೆ ಮತ್ತು ಸಮಸ್ಯೆಗಳ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಡೆಸಿದ ರಾಜ್ಯಾದ್ಯಂತ ಹೋರಾಟದ ಅಂಗವಾಗಿ ಅಭಾವಿಪ ಉಡುಪಿ ವತಿಯಿಂದ ಅಜ್ಜರಕಾಡು ಯುದ್ಧ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು. ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯದಲ್ಲಿ ತರಗತಿಗಳಿಗೆ, ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಶಾಲಾ ಕಾಲೇಜು ಆರಂಭವಾಗುವ ಮತ್ತು ಬಿಡುವ ಸಮಯದಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿನಿಯರಿಗೆ ಉಚಿತ ಪ್ರಯಾಣ ನೀಡಿದ ಹಾಗೆ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಬೇಕು ಎಂದು ಅಭಾವಿಪ ಉಡುಪಿ ಆಗ್ರಹಿಸಿದೆ.
ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಸುಮುಖ ಭಟ್, ತಾಲೂಕು ಸಂಚಾಲಕ ಶ್ರೀಹರಿ, ನಗರ ಕಾರ್ಯದರ್ಶಿ ಗಣೇಶ್ ಪೂಜಾರಿ, ನಗರ ಸಹ ಕಾರ್ಯದರ್ಶಿ ಶ್ರೀವತ್ಸ, ಪ್ರಮುಖರದ ಆಶೀಶ್ ಶೆಟ್ಟಿ, ಅಜಿತ್, ವಿನೋದ, ನವೀನ್ ಉಪಸ್ಥಿತರಿದ್ದರು.