Friday, October 18, 2024
Friday, October 18, 2024

ಬಡತನ ಮತ್ತು ಅಜ್ಞಾನದಿಂದ ಜನಸಂಖ್ಯೆ ಹೆಚ್ಚಳ: ನ್ಯಾ. ಶರ್ಮಿಳಾ ಎಸ್

ಬಡತನ ಮತ್ತು ಅಜ್ಞಾನದಿಂದ ಜನಸಂಖ್ಯೆ ಹೆಚ್ಚಳ: ನ್ಯಾ. ಶರ್ಮಿಳಾ ಎಸ್

Date:

ಉಡುಪಿ, ಜುಲೈ 11: ದೇಶದಲ್ಲಿ ಹೆಚ್ಚಾಗುತ್ತಿರುವ ಜನಸಂಖ್ಯಾ ಸಮಸ್ಯೆಗೆ ಬಡತನ, ಅಜ್ಞಾನ ಮತ್ತು ಮೂಢನಂಬಿಕೆ ಮುಂತಾದವುಗಳು ಕಾರಣವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು. ಅವರು ಮಂಗಳವಾರ ನಗರದ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜನಸಂಖ್ಯಾ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವುದರಿಂದ ಜನಸಂಖ್ಯಾ ಹೆಚ್ಚಳವನ್ನು ತಡೆಗಟ್ಟಬಹುದಾಗಿದ್ದು, ಕುಟುಂಬ ನಿಯಂತ್ರಣ ಕ್ರಮಗಳನ್ನು ಅನುಸರಿಸುವುದೂ ಕೂಡಾ ಅಗತ್ಯವಾಗಿದೆ. ಪ್ರಸ್ತುತ ಮುಂದುವರಿದ ದೇಶಗಳಲ್ಲಿ ಜನಸಂಖ್ಯೆ ಹೆಚ್ಚಳವು ಬಹುದೊಡ್ಡ ಸಮಸ್ಯೆಯಾಗಿದ್ದು, ಇದರಿಂದಾಗಿ ಹಲವು ಆರ್ಥಿಕ, ಸಾಮಾಜಿಕ ಸಮಸ್ಯೆಗಳು ಉದ್ಭವವಾಗಿವೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿ, ಕುಟುಂಬದ ನಿರ್ವಹಣೆ ಹಾಗೂ ರಾಷ್ಟ್ರದ ಅಭಿವೃದ್ಧಿಯಲ್ಲಿ ಜನಸಂಖ್ಯೆ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಶಿಕ್ಷಣದ ಕೊರತೆ, ಬಾಲ್ಯ ವಿವಾಹ, ಅಜ್ಞಾನ, ಮುಂತಾದವುಗಳು ಜನಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದ್ದು, ಜನಸಂಖ್ಯಾ ಹೆಚ್ಚಳವು ನೇರವಾಗಿ ಪ್ರಕೃತಿ ಮೇಲೆ ಪರಿಣಾಮ ಬೀರಲಿದ್ದು, ಪ್ರಕೃತಿಯಲ್ಲಿ ಅಸಮತೋಲನ ಕಾಣುವಂತಹ ಸಾಧ್ಯತೆಯಿದೆ ಎಂದರು. ಜನಸಂಖ್ಯಾ ದಿನಾಚರಣೆ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮ್‌ರಾವ್ ಕೆ., ಪ್ರಭಾರ ತಾಲೂಕು ಆರೋಗ್ಯಾಧಿಕಾರಿ ಡಾ. ಅಂಜಲಿ ವಾಗ್ಲೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್., ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ.ರಘುನಾಥ ಕೆ.ಎಸ್., ನಿರ್ದೇಶಕಿ ಡಾ.ನಿರ್ಮಲಾ ಕುಮಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಸ್ವಾಗತಿಸಿ, ಹಿರಿಯ ತಾಲೂಕು ಆರೋಗ್ಯ ನಿರೀಕ್ಷಣಾ ಅಧಿಕಾರಿ ದೇವಪ್ಪ ಪಟಗಾರ್ ನಿರೂಪಿಸಿ, ಕಾಲೇಜಿನ ಉಪನ್ಯಾಸಕ ಡಾ.ನವೀನ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!