ಉಡುಪಿ, ಜುಲೈ 13: ತೋಟಗಾರಿಕೆ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕೆ ಕಸಿ/ ಸಸಿ ಗಿಡಗಳನ್ನು ಉತ್ಪಾದಿಸಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಹಾಗೂ ಕೆದೂರು, ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ (ರೂ. 20), ಕಸಿ ಗೇರು (ರೂ. 32), ಕಾಳುಮೆಣಸು (ರೂ.11), ತೆಂಗು (ರೂ. 75) ಹಾಗೂ ತೆಂಗು DxT ತಳಿ (ರೂ. 170) ಗಿಡಗಳು ಲಭ್ಯವಿದೆ.
ಶಿವಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ, ಕಾಳುಮೆಣಸು ಹಾಗೂ ತೆಂಗು DxT ತಳಿ ಖರೀದಿಸಲು ಮೊ.ನಂ: 7892326323, ವಾರಂಬಳ್ಳಿ ತೋಟಗಾರಿಕಾ ಕ್ಷೇತ್ರದಲ್ಲಿ ಅಡಿಕೆ, ಕಾಳುಮೆಣಸು ಹಾಗೂ ತೆಂಗು ಗಿಡಗಳನ್ನು ಖರೀದಿಸಲು ಮೊ.ನಂ: 8095991105, ಕೆದೂರು ತೋಟಗಾರಿಕಾ ಕ್ಷೇತ್ರದಲ್ಲಿ ಲಭ್ಯವಿರುವ ಅಡಿಕೆ ಹಾಗೂ ತೆಂಗು ಗಿಡಗಳನ್ನು ಖರೀದಿಸಲು ಮೊ.ನಂ: 9482166313, ಕುಂಭಾಶಿ ತೋಟಗಾರಿಕಾ ಕ್ಷೇತ್ರದಲ್ಲಿನ ಅಡಿಕೆ, ಕಸಿಗೇರು ಹಾಗೂ ಕಾಳುಮೆಣಸು ಸಸಿಗಳನ್ನು ಖರೀದಿಸಲು ಮೊ.ನಂ: 8792644127, ರಾಮಸಮುದ್ರ ತೋಟಗಾರಿಕಾ ಕ್ಷೇತ್ರದಲ್ಲಿ ಅಡಿಕೆ, ಕಸಿಗೇರು ಹಾಗೂ ಕಾಳುಮೆಣಸು ಸಸಿಗಳನ್ನು ಖರೀದಿಸಲು ಮೊ.ನಂ: 7892326323 ಹಾಗೂ ಕುಕ್ಕಂದೂರು ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಹಾಗೂ ತೆಂಗಿನ ಗಿಡಗಳನ್ನು ಖರೀದಿಸಲು ಮೊ. ನಂ: 9380964158 ಅನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.