ಉಡುಪಿ, ಜು. 26: ಬೈಂದೂರು ತಾಲೂಕು ನಾವುಂದದಲ್ಲಿ ತೀವ್ರ ಮಳೆಯಿಂದ ನೆರೆ ಪೀಡಿತವಾಗಿರುವ ಪ್ರದೇಶ ಮತ್ತು ನಿರೋಡಿಯಲ್ಲಿ ಸೇತುವೆಗೆ ಹಾನಿಯಾದ ಪ್ರದೇಶಕ್ಕೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನೆರೆ ಬಾದಿತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರದ ತೆಕ್ಕಟ್ಟೆಯಲ್ಲಿರುವ ಸೈಕ್ಲೋನ್ ಶೆಲ್ಟರ್ಗೂ ಜಿಲ್ಲಾಧಿಕಾರಿ ಭೇಟಿ ನೀಡಿ, ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ ಹಾಗೂ ಮತ್ತಿತರರು ಉಪಸ್ಥಿತರಿದ್ದರು.