ಉಡುಪಿ, ಜು. 28: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಆಂಗ್ಲಭಾಷಾ ವಿಭಾಗದ ಸಹ ಪ್ರಾಧ್ಯಾಪಕರಾದ ಶ್ರೀಧರ್ ಭಟ್ ಅವರಿಗೆ ಕುವೆಂಪು ವಿ.ವಿ. ಪಿ.ಎಚ್.ಡಿ.ಪದವಿ ನೀಡಿದೆ. ಇವರು THE PERCEPTIONS OF ESL TEACHERS AND LEARNERS TOWARDS USING ICT TO DEVELOP LEARNERS’ COMMUNICATIVE COMPETENCE ಎಂಬ ಪ್ರೌಢ ಪ್ರಬಂಧ ಮಂಡಿಸಿದ್ದರು. ಇವರಿಗೆ ಸಹ್ಯಾದ್ರಿ ಕಲಾ ಕಾಲೇಜಿನ ಭಾಷಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಲ್ಲಿಕಾರ್ಜುನ ಮೇಟಿ ಮಾರ್ಗದರ್ಶನ ಮಾಡಿದ್ದರು.
ಶ್ರೀಧರ್ ಭಟ್ ಅವರು ಈ ಹಿಂದೆ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇಲ್ಲಿ 16 ವರ್ಷಗಳ ಕಾಲ ಆಂಗ್ಲಭಾಷಾ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯದ (IGNOU) ಉಡುಪಿ ಅಧ್ಯಯನ ಕೇಂದ್ರದ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಸಂಶೋಧನಾ ಲೇಖನಗಳು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಜರ್ನಲ್ ಗಳಲ್ಲಿ ಪ್ರಕಟಗೊಂಡಿವೆ.