ಉಡುಪಿ, ಆ. 1: ಕಡಲ್ಕೊರೆತ ತಡೆ ಕುರಿತಂತೆ ಶಾಶ್ವತ ಪರಿಹಾರ ಒಡಗಿಸಲು ಕ್ರಿಯಾ ಯೋಜನೆ ರೂಪಿಸಲಾಗುವುದು. ಇದಕ್ಕೆ ಎಷ್ಟು ಹಣ ಬೇಕು ಎಂಬ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಅನುದಾನ ಹೊಂದಾಣಿಕೆ ಮಾಡಲಾಗುವುದು. ಪಡುಬಿದ್ರೆ ಬೀಚ್ ನಲ್ಲಿ ಸಾಕಷ್ಟು ಕಾಮಗಾರಿ ನೆಡೆದಿದ್ದು, ಇನ್ನು ಅನೇಕ ಕಾಮಗಾರಿ ಬಾಕಿ ಹಾಗೂ ಹೊಸ ಕಾಮಗಾರಿ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಮಂಗಳವಾರ ಪಡುಬಿದ್ರೆ ಬೀಚ್ ನಲ್ಲಿ ಕಡಲ್ಕೊರೆತ ವೀಕ್ಷಿಸಿ ಮಾತನಾಡಿದರು.
ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಯ ವೇತನ ಬಿಡುಗಡೆ ಬಗ್ಗೆ ಕೂಡಲೇ ಹಣಕಾಸು ಇಲಾಖೆಗೆ ಸೂಚನೆ ನೀಡಲಾಗುವುದು ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬಂದರು ಮತ್ತು ಮೀನುಗಾರಿಕೆ ಸಚಿವ ಮಾಂಕಳು ವೈದ್ಯ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮತ್ತಿತರರಿದ್ದರು.