Monday, November 25, 2024
Monday, November 25, 2024

ಶಿಷ್ಟಾಚಾರ ಎಲ್ಲರಿಗೂ ಅನ್ವಯವಾಗಬೇಕಲ್ಲವೆ: ಮಾಜಿ ಸಚಿವ ಸುರೇಶ್ ಕುಮಾರ್ ಪ್ರಶ್ನೆ

ಶಿಷ್ಟಾಚಾರ ಎಲ್ಲರಿಗೂ ಅನ್ವಯವಾಗಬೇಕಲ್ಲವೆ: ಮಾಜಿ ಸಚಿವ ಸುರೇಶ್ ಕುಮಾರ್ ಪ್ರಶ್ನೆ

Date:

ಬೆಂಗಳೂರು, ಆ. 5: ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ವತಿಯಿಂದ ವಕೀಲರ ರಾಜ್ಯಮಟ್ಟದ ಹತ್ತನೇ ಸಮಾವೇಶ 12 ನೇ ಆಗಸ್ಟ್ ರಂದು ಮೈಸೂರಿನಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಸುಪ್ರೀಂ ಕೋರ್ಟಿನ ಗೌರವಾನ್ವಿತ ನ್ಯಾಯಮೂರ್ತಿಗಳು, ರಾಜ್ಯ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಮತ್ತಿತರರು ಭಾಗವಹಿಸುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೂ ಸಹ ಓರ್ವ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆಂದು ಓದಿ ಆಶ್ಚರ್ಯವಾಯಿತು.

ನನ್ನದೊಂದು ಪ್ರಶ್ನೆ. ನ್ಯಾಯಾಂಗದ ಶಿಷ್ಟಾಚಾರದ ಪ್ರಕಾರ ಡಿ ಕೆ ಶಿವಕುಮಾರ್ ರವರು ಈ ಕಾರ್ಯಕ್ರಮದ ವೇದಿಕೆಯಲ್ಲಿ ಭಾಗವಹಿಸಬಹುದೇ? ನಾನು ಹಿಂದೆ ಕಾನೂನು ಸಚಿವನಾಗಿದ್ದಾಗ ರಾಜ್ಯದ ಉಚ್ಚ ನ್ಯಾಯಾಲಯದ ಅಂದಿನ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನ್ಯಾಯಾಲಯದ ಹೊಸ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿತ್ತು. ಆಗ ಮುಖ್ಯ ನ್ಯಾಯಮೂರ್ತಿಗಳೊಡನೆ ವೇದಿಕೆ ಮೇಲೆ ಕುಳಿತುಕೊಳ್ಳುವ ಅತಿಥಿಗಳ ಮೇಲೆ (ಕಾನೂನು ಸಚಿವನಾಗಿದ್ದ ನನ್ನದೂ ಸೇರಿದಂತೆ) ಏನಾದರೂ ಕ್ರಿಮಿನಲ್ ಕೇಸ್ ಇದೆಯೇ ಎಂದು ಪ್ರಶ್ನಿಸಲಾಗಿದ್ದ ಘಟನೆ ನೆನಪಿಗೆ ಬರುತ್ತಿದೆ. ನನ್ನ ಮೇಲೆ ಯಾವುದೇ ಪ್ರಕರಣ ಇರಲಿಲ್ಲ ಎಂಬುದು ಬೇರೆ ವಿಚಾರ. ಡಿ.ಕೆ ಶಿವಕುಮಾರ್ ರವರು ಎದುರಿಸುತ್ತಿರುವ ಕೆಲ ಕೇಸ್ ಗಳು ರಾಜ್ಯದ ಉಚ್ಛ ನ್ಯಾಯಾಲಯ ಹಾಗೂ ಸರ್ವೋಚ್ಚ ನ್ಯಾಯಾಲಯಗಳ ಮುಂದೆ ಇರುವುದು ಎಲ್ಲರಿಗೂ ತಿಳಿದ ವಿಷಯ. ಅಂತಹ ವ್ಯಕ್ತಿ ಈ ಕಾರ್ಯಕ್ರಮದ ವೇದಿಕೆಯಲ್ಲಿ ಸರ್ವೋಚ್ಚ ಹಾಗೂ ಉಚ್ಛ ನ್ಯಾಯಾಲಯಗಳ ನ್ಯಾಯಮೂರ್ತಿಗಳ ಜೊತೆ ಭಾಗವಹಿಸುವುದು ಸೂಕ್ತವೇ? ಕಾರ್ಯಕ್ರಮದ ಯೋಜಕ ವಕೀಲರ ಪರಿಷತ್ ಈ ಕುರಿತು ಸ್ಪಷ್ಟೀಕರಣ ನೀಡಬೇಕು.. ನ್ಯಾಯಮೂರ್ತಿಗಳಿಗೆ ಇದು ಸಮ್ಮತವೇ? ಶಿಷ್ಟಾಚಾರ ಎಲ್ಲರಿಗೂ ಅನ್ವಯವಾಗಬೇಕಲ್ಲವೆ? ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!