ಉಡುಪಿ, ಆ.7: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಆಗಸ್ಟ್ 10 ರಂದು ಬೆಳಗ್ಗೆ 10.30 ಕ್ಕೆ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ. .ಲಿ, ಆಭರಣ ಜುವೆಲ್ರ‍್ಸ್ ಬಳಿ, ಕಾರ್ಪೊರೇಶನ್ ಬ್ಯಾಂಕ್ ರೋಡ್, ಅನುರಾಗ ಕಾಂಪ್ಲೆಕ್ಸ್, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.