Monday, November 25, 2024
Monday, November 25, 2024

ಕರಾವಳಿಯ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ 840 ಕೋಟಿ ರೂ. ಯೋಜನೆ

ಕರಾವಳಿಯ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ 840 ಕೋಟಿ ರೂ. ಯೋಜನೆ

Date:

ಉಡುಪಿ, ಆ. 8: ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರ ಆವರಿಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಪ್ರಸ್ತಾಪಿತ ಕೆ.ಶೂರು – ಬ್ಲೂ ಪ್ಯಾಕ್ ಯೋಜನೆಗೆ ಸಮರ್ಪಕವಾದ ವಿಸ್ತೃತ ಯೋಜನಾ ವರದಿ (ಡಿ.ಪಿ.ಆರ್) ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪರಿಸರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ಹಿರಿಯ ಪರಿಸರ ಅರ್ಥಶಾಸ್ತ್ರಜ್ಞ ಮತ್ತು ಕಾರ್ಯಗುಂಪಿನ ನಾಯಕ ಪಾಬ್ಲೋ ಸಿ. ಬೆನಿಟೆಜ್ ನೇತೃತ್ವದ ವಿಶ್ವಬ್ಯಾಂಕ್ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, 317 ಕಿಲೋಮೀಟರ್ ಕರುನಾಡ ಕರಾವಳಿಯಲ್ಲಿ ಪ್ರತಿನಿತ್ಯ 50 ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗುತ್ತಿದೆ ಎಂಬುದು ಆಘಾತಕಾರಿ ಅಂಶವಾಗಿದ್ದು, ಇದರಿಂದ ಸಮುದ್ರ ತಟಕ್ಕೆ ಬಂದು ಮೊಟ್ಟೆ ಇಟ್ಟು ಮರಿ ಮಾಡುವ ಆಮೆ, ಮೊದಲಾದ ಜಲಚರಗಳ ಸಂತಾನೋತ್ಪತ್ತಿಗೆ ಬಾಧಕವಾಗುತ್ತಿದೆ ಎಂಬ ಅಂಶದ ಬಗ್ಗೆ ಸಚಿವರು ವ್ಯಾಕುಲ ವ್ಯಕ್ತಪಡಿಸಿದರು.

ಮಾನವರ ಮತ್ತು ಸಮಸ್ತ ಜೀವಸಂಕುಲದ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿರುವ ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಿಸುವ ಅಗತ್ಯ ಹಿಂದೆಂದಿಗಿಂತ ಇಂದು ಹೆಚ್ಚಿದೆ ಎಂದು ಪ್ರತಿಪಾದಿಸಿದ ಸಚಿವರು, ಕರುನಾಡ ಕರಾವಳಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುತ್ತಿರುವ ದುಷ್ಪರಿಣಾಮ ತಗ್ಗಿಸುವ ನಿಟ್ಟಿನಲ್ಲಿ ಈ ಯೋಜನೆ ಸಹಕಾರಿ ಆಗಬಹುದು ಎಂದು ತಿಳಿಸಿದರು. ನಿಯೋಗದಲ್ಲಿದ್ದ ಸದಸ್ಯರು ಕರಾವಳಿಯಲ್ಲಿರುವ ಮೀನುಗಾರರು, ಮೀನುಗಾರಿಕೆಗೆ ವಿರಾಮವಿದ್ದ ಸಂದರ್ಭದಲ್ಲಿ ಕಡಲತಡಿಯಲ್ಲಿ ಸಂಗ್ರಹವಾದ ಪ್ಲಾಸ್ಟಿಕ್ ತ್ಯಾಜ್ಯ ತೆರವು ಮಾಡಬಹುದು. ಮೀನು ಹಿಡಿಯುವುದಕ್ಕಿಂತ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವೇ ಅವರಿಗೆ ಹೆಚ್ಚು ಲಾಭದಾಯಕ ಆಗುತ್ತದೆ ಎಂದು ತಿಳಿಸಿದರು.

ಬ್ಲೂ ಪ್ಯಾಕ್ ಯೋಜನೆಯ ಒಟ್ಟು ಮೊದ್ದ 840 ಕೋಟಿ ರೂ. ಆಗಿದ್ದು, ಇದರಲ್ಲಿ ಶೇ.70 ರಷ್ಟನ್ನು ವಿಶ್ವಬ್ಯಾಂಕ್ ಸಾಲದ ರೂಪದಲ್ಲಿ ನೀಡಲಿದೆ. ರಾಜ್ಯ ಸರ್ಕಾರ ಶೇ.30 ರಷ್ಟು ಭರಿಸಬೇಕಾಗುತ್ತದೆ. ಪ್ರಾಥಮಿಕ ಯೋಜನಾ ವರದಿ (ಪಿಪಿಆರ್)ಗೆ ನೀತಿ ಆಯೋಗ ಮತ್ತು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಬೆಂಬಲವಿದೆ ಎಂದು ಅಧಿಕಾರಿಗಳು ವಿವರಿಸಿದರು. ಅರಣ್ಯ ಮತ್ತು ಪರಿಸರ ಇಲಾಖೆಯ ಉನ್ನತಾಧಿಕಾರಿಗಳಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಮತ್ತು ವಿಜಯ ಮೋಹನ್ ರಾಜ್ ಮತ್ತಿತರರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!