Monday, November 25, 2024
Monday, November 25, 2024

ಕಾಂಗ್ರೆಸ್ ನದ್ದು ಈಗ ಎಷ್ಟು ಪರ್ಸೆಂಟ್ ಸರಕಾರ?: ಶಾಸಕ ವೇದವ್ಯಾಸ ಕಾಮತ್

ಕಾಂಗ್ರೆಸ್ ನದ್ದು ಈಗ ಎಷ್ಟು ಪರ್ಸೆಂಟ್ ಸರಕಾರ?: ಶಾಸಕ ವೇದವ್ಯಾಸ ಕಾಮತ್

Date:

ಮಂಗಳೂರು, ಆ. 8: ರಾಜ್ಯದ ಕೃಷಿ ಸಚಿವರ ವಿರುದ್ಧ ಕೃಷಿ ಅಧಿಕಾರಿಗಳು ಅಧಿಕೃತವಾಗಿ ರಾಜ್ಯಪಾಲರಿಗೆ ಲಿಖಿತವಾಗಿ ದೂರು ನೀಡಿದ್ದು, ಈ ಸರಕಾರದ ಭ್ರಷ್ಟ ಆಡಳಿತ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವರು 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳು ಆರೋಪಿಸಿ, ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಲ್ಲಿಂದ ನಾವು ಮಾಡುತ್ತಿದ್ದ ಭ್ರಷ್ಟಾಚಾರ ಆರೋಪವನ್ನು ಅಲ್ಲಗೆಳೆಯುತ್ತಿದ್ದ ಕಾಂಗ್ರೆಸ್ ಸರಕಾರ ಈಗ ಈ ದೂರಿಗೆ ಸಂಬಂಧಿಸಿದಂತೆ ರಾಜ್ಯದ ಜನತೆಗೆ ಉತ್ತರ ಕೊಡಬೇಕು.

ಬಿಜೆಪಿ ಸರಕಾರದ ಆಡಳಿತಾವಯಲ್ಲಿ ಕಾಂಗ್ರೆಸ್ ಮನಸ್ಥಿತಿಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನ ಮೂಲಕ 40 % ಕಮಿಷನ್ ಆರೋಪ ಮಾಡಲಾಗಿತ್ತು. ವರ್ಷದಿಂದ ಈ ಬಗ್ಗೆ ಅಧಿಕೃತವಾಗಿ ದೂರು ನೀಡಿ ಎಂದು ಅಂದಿನ ಮುಖ್ಯಮಂತ್ರಿಯೇ ಸೂಚನೆ ನೀಡಿದ್ದರೂ ಅವರು ಎಲ್ಲೂ ದೂರು ನೀಡಿರಲಿಲ್ಲ. ಹಾಗಿದ್ದರೂ ಕಾಂಗ್ರೆಸ್ ಇದೇ ವಿಚಾರವನ್ನು ದೊಡ್ಡದು ಮಾಡಿ, ಚುನಾವಣೆಯಲ್ಲೂ ಹೋದಲ್ಲೆಲ್ಲ ಭ್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿದ್ದರು. ಪೇ ಸಿಎಂ ಎಂಬ ಅಭಿಯಾನವನ್ನೂ ಮಾಡಿ ಎಲ್ಲೆಡೆ ಪೋಸ್ಟರ್ ಗಳನ್ನು ಅಂಟಿಸಿದ್ದರು. ಅಂದು ಬೊಬ್ಬೆ ಹೊಡೆದ ಕಾಂಗ್ರೆಸ್ ಈಗ ಈ ಪ್ರಕರಣಕ್ಕೆ ಉತ್ತರ ನೀಡಬೇಕು.

ಸಾರಿಗೆ ಇಲಾಖೆಯ ನೌಕರನ ಆತ್ಮಹತ್ಯೆ ಯತ್ನ ಪ್ರಕರಣವೂ ಇದೇ ಮಾದರಿಯ ಕಿರುಕುಳದಿಂದ ಆಗಿರುವುದು ಕಂಡು ಬರುತ್ತಿದೆ. ಈ ಘಟನೆಯಲ್ಲೂ ಇದೇ ಸಚಿವರ ವಿರುದ್ಧ ಆರೋಪ ಕೇಳಿ ಬಂದಿತ್ತು. ಆದರೆ ಇಡೀ ಸರಕಾರವೇ ಸಚಿವರ ಪರವಾಗಿ ನಿಂತು ಮಾತನಾಡಿತು. ಈಗ ಈ ಪ್ರಕರಣದಲ್ಲೂ ಅವರ ಪರ ವಕಾಲತ್ತು ನಡೆಸಿದರೆ ಅದರಲ್ಲೇನೂ ಅಚ್ಚರಿ ಇಲ್ಲ. ಭ್ರಷ್ಟಾಚಾರವನ್ನು ಸಹಿಸಲ್ಲ ಎಂದು ಅಧಿಕಾರಕ್ಕೆ ಬಂದಲ್ಲಿಂದ ಹೋದಲ್ಲೆಲ್ಲ ಹೇಳುತ್ತಿರುವ ಮುಖ್ಯಮಂತ್ರಿಗೆ ತಮ್ಮ ಕಾಲ ಬುಡದಲ್ಲೇ ಭ್ರಷ್ಟಾಚಾರ ನಡೆಯುತ್ತಿರುವುದು ಕಾಣಿಸುತ್ತಿಲ್ಲವೇ ?.

ಈ ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಸರಕಾರವೇ ಮುಂದೆ ನಿಂತಿದ್ದು, ಉಡುಪಿ ವಿಡಿಯೋ ರೆಕಾರ್ಡಿಂಗ್ ಪ್ರಕರಣದಂತೆ ಕಾಟಾಚಾರಕ್ಕೆ ಸಮಿತಿಯೊಂದನ್ನು ರಚಿಸಿ ಈ ಪತ್ರವೇ ನಕಲಿ ಎಂದು ಬಿಂಬಿಸಲು ಶತ ಪ್ರಯತ್ನ ಮಾಡುತ್ತದೆ.

ವರ್ಗಾವಣೆಯಲ್ಲೂ ಭ್ರಷ್ಟಾಚಾರ: ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಲ್ಲಿಂದ ಸುಸೂತ್ರವಾಗಿ ಆಡಳಿತ ನಡೆಸುವುದನ್ನು ಬಿಟ್ಟು ವರ್ಗಾವಣೆ ದಂಧೆ ಮಾಡುತ್ತಿರುವುದನ್ನು ಕಾಣುತ್ತಿದ್ದೇವೆ. ಪ್ರತಿನಿತ್ಯ ಒಂದಲ್ಲ ಒಂದು ಇಲಾಖೆಯ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಬೀಳುತ್ತಿದೆ. ಇವೆಲ್ಲದರಲ್ಲಿ ಭಾರಿ ಭ್ರಷ್ಟಾಚಾರ ನಡೆದಿರುವ ಅನುಮಾನಗಳಿವೆ. ಆದ್ದರಿಂದ ಸಚಿವ ಚಲುವರಾಯಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ ಸೇರಿದಂತೆ ಎಲ್ಲ ವರ್ಗಾವಣೆ ದಂಧೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು.

ಅಬ್ಬಕ್ಕ ಅಗ್ನಿವೀರ ತರಬೇತಿ ಕೇಂದ್ರದ ಹಾಸ್ಟೆಲ್ ಸ್ಥಗಿತ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ನಡೆಸಲ್ಪಡುತ್ತಿರುವ ಕದ್ರಿಯಲ್ಲಿರುವ ರಾಣಿ ಅಬ್ಬಕ್ಕ ಅಗ್ನಿವೀರನತರಬೇತಿ ಕೇಂದ್ರದ ಹಾಸ್ಟೆಲ್ ನ್ನು ಅನುದಾನದ ಕೊರತೆಯ ನೆಪದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಹಿಂದೆ ಹಾಸ್ಟೆಲಿನಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತಿದ್ದ ನೌಕರರಿಗೆ ಕಳೆದ 3-4 ತಿಂಗಳಿನಿಂದ ವೇತನ ನೀಡಿಲ್ಲ. ಕೇಂದ್ರ ಸರಕಾರದ‌ ಅಗ್ನಿವೀರ್ ಯೋಜನೆಯನ್ನು ವಿಫಲಗೊಳಿಸಲು ರಾಜ್ಯ ಸರಕಾರ ಇಂತಹ ಕೆಲಸ ಮಾಡುತ್ತಿದೆ.

ವೆನ್ಲಾಕ್ ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆ: ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಈ ವಿಚಾರದಲ್ಲಿ ಗಮನ ಹರಿಸಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಗಾಢ ನಿದ್ರೆಗೆ ಜಾರಿದ್ದಾರೆ. ವೆನ್ಲಾಕ್ ಆಸ್ಪತ್ರೆಯ ಡಯಾಲಿಸಿಸ್ ವಿಭಾಗದಲ್ಲಿ 21 ಡಯಾಲಿಸಿಸ್ ಯಂತ್ರಗಳಿದ್ದು ಇದರಲ್ಲಿ 12 ಯಂತ್ರಗಳು ಹಾಳಾಗಿದೆ.

ವೆನ್ಲಾಕ್ ಆಸ್ಪತ್ರೆಯಲ್ಲಿ 90ಕ್ಕೂ ಅಧಿಕ ಹೊರ ರೋಗಿಗಳು ಡಯಾಲಿಸಿಸ್ ಚಿಕಿತ್ಸೆ ಪಡೆಯುತಿದ್ದು ಯಂತ್ರಗಳನ್ನು ತ್ವರಿತವಾಗಿ ದುರಸ್ತಿ ಮಾಡುವ ಅವಶ್ಯಕತೆಯಿದೆ. ಸರಕಾರ ರಚನೆಯಾಗಿ ತಿಂಗಳುಗಳು ಕಳೆದರೂ ಆರೋಗ್ಯ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಆರ್ಥಿಕವಾಗಿ ತೀರಾ ಹಿಂದುಳಿದ ವರ್ಗದ ಜನರೇ ಹೆಚ್ಚಾಗಿ ಬರುವ ವೆನ್ಲಾಕ್ ಆಸ್ಪತ್ರೆಯಲ್ಲಿ ಸೌಲಭ್ಯಗಳ ಕುರಿತು ಸರಕಾರ ಗಮನ ಹರಿಸಬೇಕಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಉಂಟಾದ ಅವ್ಯವಸ್ಥೆಯಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದ್ದು ಆರೋಗ್ಯ ಸಚಿವರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!