Monday, November 25, 2024
Monday, November 25, 2024

ಬಿಜೆಪಿ ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದು: ಮುಖ್ಯಮಂತ್ರಿ ಸಿದ್ಧರಾಮಯ್ಯ

ಬಿಜೆಪಿ ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದು: ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

ಬೆಂಗಳೂರು, ಆ. 12: ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ. ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ.. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ?

ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವರಾದ ಆರ್. ಅಶೋಕ್ ಅವರು ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ ಎಂಬುದು ಅವರ ಮನಸಿನಲ್ಲೇ ಇದೆ ಎನ್ನುವುದನ್ನು ತೋರಿಸುತ್ತದೆ. ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದುಬಂದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ ಜನತೆಯೆದುರು ಸಾಬೀತು ಮಾಡುತ್ತೇವೆ.

ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯ ಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ. ನರೇಂದ್ರ ಮೋದಿ ಅವರು ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದು ನೋಡಿದರೆ ಸ್ವತಃ ಬೊಮ್ಮಾಯಿಯವರಿಗೆ ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ.

ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ. ಪಿ.ಒ.ಡಬ್ಲ್ಯೂ ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.
ಈ ನಡುವೆ ಕೆಲವೇ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!