ನವದೆಹಲಿ, ಆ.13: ದೇಶ ಮತ್ತುದೇಶವಾಸಿಗಳ ನಡುವಿನ ಸಂಬಂಧವನ್ನು ಬಲಪಡಿಸುವುದು, ಭಾರತೀಯರ ಹೃದಯದಲ್ಲಿ ದೇಶಭಕ್ತಿಯನ್ನು ಮೂಡಿಸಿ, ರಾಷ್ಟ್ರಧ್ವಜದ ಬಗ್ಗೆ ಜಾಗೃತಿ ಮೂಡಿಸುವುದು ‘ಹರ್ ಘರ್ ತಿರಂಗಾ’ ಅಭಿಯಾನದ ಉದ್ದೇಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
‘ಹರ್ ಘರ್ ತಿರಂಗಾ’ ಆಂದೋಲನದ ಪ್ರಯುಕ್ತ ನಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಡಿಪಿಯನ್ನು ಬದಲಾಯಿಸೋಣ ಮತ್ತು ನಮ್ಮ ಪ್ರೀತಿಯ ದೇಶ ಮತ್ತು ನಮ್ಮ ನಡುವಿನ ಬಂಧವನ್ನು ಆಳಗೊಳಿಸುವ ಈ ವಿಶಿಷ್ಟ ಪ್ರಯತ್ನಕ್ಕೆ ಬೆಂಬಲವನ್ನು ನೀಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ನಲ್ಲಿ (ಈ ಹಿಂದೆ ಟ್ವಿಟರ್) ಪ್ರಕಟಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಡಿಪಿಯನ್ನು ರಾಷ್ಟ್ರಧ್ವಜವಾಗಿ ಬದಲಾಯಿಸಲಾಗಿದೆ.