ಬ್ರಹ್ಮಾವರ, ಆ. 14: ಸೈಂಟ್ ಮೇರಿಸ್ ಸಿರಿಯನ್ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಉಡುಪ ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಗ್ರಂಥಾಲಯದ ಪಾತ್ರ ಬಹಳ ಮುಖ್ಯವಾದದ್ದು. ಗ್ರಂಥಾಲಯ ಬೆಳೆದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾದಂತೆ ಎಂದರು.
ಸಂಸ್ಥೆಯ ಕಾರ್ಯದರ್ಶಿ ಅಲ್ವರಿಸ್ ಡಿಸಿಲ್ವ, ಖಾಜಾಂಚಿ ಜೋಯ್ಸನ್ ರೋಡ್ರಿಗಸ್, ಆಡಳಿತ ಮಂಡಳಿ ಸದಸ್ಯರಾದ ಆಲ್ಬರ್ಟ್ ರೋನಿ ಡಿಸಿಲ್ವ, ಕಛೇರಿ ಅಧಿಕ್ಷಕರಾದ ಸೆಲಿನ ಬಾಂಜ್, ಗ್ರಂಥಾಲಯ ಸಿಬ್ಬಂದಿ ವರ್ಗದವರಾದ ಸತೀಶ, ಪ್ರಮೀಳಾ ಡಿಸಿಲ್ವ, ಎಸ್ತೆಫಿನ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಗ್ರಂಥಪಾಲಕಿ ಸುರೇಖಾ ಕಾರ್ಯಕ್ರಮ ನಿರೂಪಿಸಿದರು.