ಉಡುಪಿ, ಆ.19: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸತತವಾಗಿ 17ನೇ ಬಾರಿಗೆ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ‘ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ 2022-23’ ಲಭಿಸಿರುತ್ತದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ ಎನ್ ರಾಜೇಂದ್ರ ಕುಮಾರ್ ರವರಿಂದ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಸಂಜೀವ ಕಾಂಚನ್, ಉಪಾಧ್ಯಕ್ಷರಾದ ಎಲ್ ಉಮಾನಾಥ, ನಿರ್ದೇಶಕರಾದ ವಿನಯ ಕುಮಾರ್ ಟಿ ಎ.. ಪ್ರಧಾನ ವ್ಯವಸ್ಥಾಪಕರು(ಪ್ರ) ರಾಜೇಶ್ ವಿ ಶೇರಿಗಾರ್ ಪ್ರಶಸ್ತಿಯನ್ನು ಸ್ವೀಕರಿಸಿದರು.
ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ., ಹಾಗೂ ಬ್ಯಾಂಕಿನ ಆಡಳಿತ ನಿರ್ದೇಶಕ ಮಂಡಳಿಯವರು ಹಾಗೂ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನ ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾದ ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ದರು.