Sunday, November 24, 2024
Sunday, November 24, 2024

ದೇವರಾಜ ಅರಸು ಅವರಿಂದ ಹಿಂದುಳಿದ ವರ್ಗಗಳಿಗೆ ಶಕ್ತಿ: ಶೋಭಾ ಕರಂದ್ಲಾಜೆ

ದೇವರಾಜ ಅರಸು ಅವರಿಂದ ಹಿಂದುಳಿದ ವರ್ಗಗಳಿಗೆ ಶಕ್ತಿ: ಶೋಭಾ ಕರಂದ್ಲಾಜೆ

Date:

ಉಡುಪಿ, ಆ.20: ರಾಜ್ಯದ ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಅರಿತಿದ್ದ ದಿ. ಡಿ. ದೇವರಾಜ ಅರಸು ಅವರು, ಅವರ ಸಮಸ್ಯೆಗಳಿಗೆ ದನಿಯಾಗಿ, ವಿವಿಧ ಕಾರ್ಯಕ್ರಮಗಳ ಮೂಲಕ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಶಕ್ತಿ ತುಂಬಿದ ಮಹಾನ್ ವ್ಯಕ್ತಿ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ದಿ.ಡಿ ದೇವರಾಜ ಅರಸು ಅವರ 108 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅರಸು ಅವರು, ಉಳುವವನೇ ಹೊಲದೊಡೆಯ ಕಾರ್ಯಕ್ರಮದ ಮೂಲಕ ರೈತರ ಅಭಿವೃದ್ಧಿಗೆ ಶ್ರಮಿಸಿದ್ದು, ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ಅಗಮಿಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಹಾಸ್ಟೆಲ್ ಗಳ ನಿರ್ಮಾಣ, ಮೀಸಲಾತಿ ನಿಯಮಗಳ ಮೂಲಕ ಹಿಂದುಳಿದ ವರ್ಗಗಳ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದು, ಶತಮಾನಗಳ ಕಾಲ ನೆನಪಿನಲ್ಲಿಕೊಟ್ಟಳುವಂತಹ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಸದಾ ಸ್ಮರಣೀಯರಾಗಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್ಪಾಲ್ ಎ ಸುವರ್ಣ ಮಾತನಾಡಿ, ರಾಜ್ಯ ಕಂಡ ಧೀಮಂತ ನಾಯಕ ಡಿ.ದೇವರಾಜ ಅರಸು ಅವರು ರಾಜ್ಯದ ಜನಸಂಖ್ಯೆಯಲ್ಲಿ ಬಹುಸಂಖ್ಯಾತವಾಗಿರುವ ಹಿಂದುಳಿದ ವರ್ಗಗಳ ಅಭಿವೃಧ್ದಿಗೆ ಶ್ರಮಿಸಿದ್ದಾರೆ. ಕರಾವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳ ಬಹುತೇಕ ಮಂದಿ ಆರ್ಥಿಕವಾಗಿ ಹಿಂದುಳಿದಿದ್ದು, ಅವರೆಲ್ಲರನ್ನೂ ಒಗ್ಗೂಡಿಸಿ ಶಕ್ತಿ ತುಂಬಬೇಕಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಸಿಎಂ ಹಾಸ್ಟೆಲ್‌ಗಳ ನಿರ್ಮಾಣ ನಡೆಯಬೇಕು ಮತ್ತು ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿಯ ಶಾಲೆಯ ಪುನಾರಾರಂಭ ಆಗಬೇಕಿದೆ ಎಂದರು. ದೇವರಾಜ ಅರಸು ಅವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ರಾಷ್ಟ್ರ ಪ್ರಶಸ್ತಿ ವಿಜೇತ ಮಾಜಿ ಶಿಕ್ಷಕ ಹಾಗೂ ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತರಾದ ಮಲ್ಪೆ ರಾಘವೇಂದ್ರ ಉಪನ್ಯಾಸ ನೀಡಿದರು.

ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿ.ಪಂ. ಸಿಇಓ ಪ್ರಸನ್ನ ಹೆಚ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ನಗರಸಭೆ ಪೌರಾಯುಕ್ತ ರಾಯಪ್ಪ, ಭಾರತ ಸೇವಾ ದಳದ ಕೇಂದ್ರ ಸಮಿತಿ ಸದಸ್ಯ ಆರೂರು ತಿಮ್ಮಪ್ಪ ಶೆಟ್ಟಿ ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್ ಲಮಾಣಿ ಸ್ವಾಗತಿಸಿದರು.

ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಅತೀ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಅಭಿನಂದನೆ, ದೇವರಾಜ ಅರಸು ಜಯಂತಿ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಹಾಗೂ ಹಿಂದುಳಿದ ವರ್ಗದ ವಿವಿಧ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು. ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!