ಉಡುಪಿ, ಆ. 20: ರಂಗಚಿನ್ನಾರಿ ಕಾಸರಗೋಡು (ರಿ.) ಇದರ ಮಹಿಳಾ ಘಟಕ ‘ನಾರಿಚಿನ್ನಾರಿ’ಯ ಕಾರ್ಯಕ್ರಮ ‘ಓಣಂ ಸಂಧ್ಯಾ’ ಕಾಸರಗೋಡಿನ ಪದ್ಮಗಿರಿ ಕಲಾ ಕುಟೀರದಲ್ಲಿ ಆಗಸ್ಟ್ 26 ಶನಿವಾರ, ಮಧ್ಯಾಹ್ನ 2.30 ಗಂಟೆಗೆ ನಡೆಯಲಿದೆ. ಅಂದು ಸಾಹಿತಿ ಕಾತ್ಯಾಯಿನಿ ಕುಂಜಿಬೆಟ್ಟು ಅವರ ಐದು ಕೃತಿಗಳು ಅನಾವರಣಗೊಳ್ಳಲಿವೆ. ಏಕತಾರಿ ಸಂಚಾರಿ (ಕವನ ಸಂಕಲನ) ಕೊಕ್ಕೊ ಕೋಕೋ (ಮಕ್ಕಳ ನಾಟಕ) ಶಿವರಾಮ ಕಾರಂತರ ಕನ್ನಡ ಪ್ರಜ್ಞೆ(ಸಂಪಾದಿತ) ಕನಕದಾಸೆರ್ನ ರಾಮಧಾನ್ಯ ಚರಿತೆ (ಅನುವಾದ) ಮೊಗೇರಿ ಗೋಪಾಲಕೃಷ್ಣ ಅಡಿಗ (ವಾಚಿಕೆ)
ಈ ಐದು ಕೃತಿಗಳನ್ನು ವಿಜಯಲಕ್ಷ್ಮೀ ಶ್ಯಾನ್ ಭೋಗ್, ಸರ್ವಮಂಗಳ ಜಯ್ ಪುಣಿಚಿತ್ತಾಯ, ದಿವ್ಯಾ ಗಟ್ಟಿ ಪರಕ್ಕಿಲ, ಸ್ನೇಹಲತಾ ದಿವಾಕರ್ ಹಾಗೂ ಡಾ.ಮಹೇಶ್ವರಿಯವರು ಅನಾವರಣಗೊಳಿಸುವವರು. ಕೃತಿ ವಿಮರ್ಶೆಯನ್ನು ಲಕ್ಷ್ಮೀ ಕೆ ಮಾಡಲಿದ್ದಾರೆ.
ಕಾರ್ಯಕ್ರಮವನ್ನು ಕೇಂದ್ರೀಯ ವಿಶ್ವವಿದ್ಯಾಲಯ ಕಾಸರಗೋಡು ಇದರ ಸಹಾಯಕ ಪ್ರಾಧ್ಯಾಪಕರಾದ ಡಾ. ಲಕ್ಷ್ಮಿ ಅವರು ಉದ್ಘಾಟಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ನಾರಿ ಚಿನ್ನಾರಿಯ ಗೌರವಾಧ್ಯಕ್ಷರಾದ ತಾರಾ ಜಗದೀಶ್ ಅವರು ವಹಿಸಿಕೊಳ್ಳಲಿದ್ದಾರೆ. ವಿದುಷಿ ಶಶಿಕಲಾ ಟೀಚರ್ ಮತ್ತು ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು ಎಂದು ರಂಗ ಚಿನ್ನಾರಿಯ ಮುಖ್ಯಸ್ಥರಾಗಿರುವ ಕಾಸರಗೋಡು ಚಿನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.