ಉಡುಪಿ, ಆ.25: ಉಡುಪಿ ತಾಲೂಕಿನಲ್ಲಿ ಕೋಟ್ಟಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಬುಧವಾರ ಮಣಿಪಾಲದ ರಾಜೀವನಗರ, ಪ್ರಗತಿನಗರ ಮುಂತಾದ ಕಡೆಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 28 ಪ್ರಕರಣ ದಾಖಲಿಸಿ, 4000 ರೂ. ದಂಡ ವಸೂಲಿ ಮಾಡಲಾಯಿತು.
ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ, ಹಿರಿಯ ಆರೊಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಮಣಿಪಾಲ ಠಾಣೆಯ ಎ.ಎಸ್.ಐ ಗಂಗಪ್ಪ ಎಸ್, ಶಿಕ್ಷಣ ಸಂಯೋಜಕ ಶಂಕರ್, ಎನ್.ಟಿ.ಸಿ.ಪಿ ವಿಭಾಗದ ಸಾಮಾಜಿಕ ಕಾರ್ಯಕರ್ತೆ ಶೈಲಾ ಶ್ಯಾಮನೂರ್, ಕಾರ್ಮಿಕ ನಿರೀಕ್ಷಕ ಸಂಜಯ್, ನಗರಸಭೆಯ ಯೋಗೀಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.