ಉಡುಪಿ, ಆ.25: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಆಗಸ್ಟ್ 19 ರಿಂದ 24 ರ ವರೆಗೆ ನಿಷೇದಿತ ಪ್ಲಾಸ್ಟಿಕ್ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ದಾಳಿ ನಡೆಸಿ 55 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು 34,000 ರೂ. ದಂಡ ವಿಧಿಸಲಾಯಿತು ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಹಾಗೂ ನಿಷೇಧಿತ ಪ್ಲಾಸ್ಟಿಕ್ಗಳನ್ನು ಬಳಸಿದ್ದಲ್ಲಿ ಬಾರಿ ದಂಡವನ್ನು ವಿಧಿಸಿ, ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಲಾಗುವುದು. ಜುಲೈ ಯಿಂದ ಈವರೆಗೆ ಒಟ್ಟು 425 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು 1,04,200 ರೂ. ದಂಡ ವಿಧಿಸಲಾಗಿದ್ದು, ಉದ್ದಿಮೆಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ಗಳನ್ನು ಉಪಯೋಗಿಸದ ಉದ್ದಿಮೆಯನ್ನು ಹಸಿರು ಸಂಸ್ಥೆ ಎಂದು ಘೋಷಿಸಲಾಯಿತು. ಎಲ್ಲಾ ಉದ್ದಿಮೆದಾರರು ಏಕ ಬಳಕೆಯ ಪ್ಲಾಸ್ಟಿಕ್ಗಳನ್ನು ಉಪಯೋಗಿಸುವುದನ್ನು ತ್ಯಜಿಸಿ ಹಸಿರು ಸಂಸ್ಥೆ ಎಂದು ಘೋಷಿಸಿಕೊಳ್ಳುವಂತೆ ಪೌರಾಯುಕ್ತರು ಸೂಚಿಸಿರುತ್ತಾರೆ.
ದಾಳಿಯಲ್ಲಿ ನಗರಸಭೆಯ ಪೌರಾಯುಕ್ತರು, ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನೀಟರಿ ಸೂಪರ್ವೈಸರ್ನವರು ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು.
ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, ರೀಯೂಸ್ ಹಾಗೂ ರೀಸೈಕಲ್ ಮಾದರಿಯಲ್ಲಿ ತ್ಯಾಜ್ಯ ವಸ್ತುಗಳನ್ನು ಕಡಿಮೆ ಮಾಡುವ ಹಿತ ದೃಷ್ಟಿಯಿಂದ ಪ್ರತಿಯೊಬ್ಬ ನಾಗರಿಕರು ಸಭೆ ಸಮಾರಂಭಗಳಲ್ಲಿ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಿ ತ್ಯಾಜ್ಯವನ್ನು ಕಡಿಮೆ ಮಾಡಿ ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿ ಮಾಡಬೇಕು. ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಪರಿಸರ ಸಂರಕ್ಷಣೆ ಮಾಡಲು ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.