ಉಡುಪಿ, ಆ. 27: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ವಿದ್ಯೋದಯ ಪಿ.ಯು. ಕಾಲೇಜಿನ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯ ರಿದಮಿಕ್ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನನ್ಯ ವಿ. ಶೆಟ್ಟಿ ಪ್ರಥಮ ಸ್ಥಾನಿಯಾಗಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಇವರನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.