ಕಾರ್ಕಳ, ಆ. 28: ದೇಶದ ಜವಾಬ್ದಾರಿಯುತ ಪ್ರಜೆಯಾಗಿ ಶಾಂತಿಯುತ ಜೀವನ ನಡೆಸಲು ಕಾನೂನಿನ ಅರಿವು ಬಹಳ ಮುಖ್ಯ ಎಂದು ಕಾರ್ಕಳದ ನ್ಯಾಯವಾದಿ ಹಾಗೂ ಜ್ಞಾನಸುಧಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಭವಿಷ್ ಕುಂದರ್ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿ ದೆಸೆಯಲ್ಲಿ ಮಕ್ಕಳಿಗೆ ಸಾಮಾನ್ಯ ಕಾನೂನಿನ ಅಡಿಯಲ್ಲಿ ಬರುವ ವಿವಿಧ ವಿಷಯಗಳು, ಪೋಕ್ಸೋ, ಅಪ್ರಾಪ್ತ ವಾಹನ ಚಾಲನೆಯ ಅನಾಹುತಗಳ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಒ. ಹಾಗೂ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್ ಎಂ. ಕೊಡವೂರು, ಉಪಪ್ರಾಂಶುಪಾಲ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸಾಹಿತ್ಯ, ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲರಾದ ಉಷಾ ರಾವ್ ಯು., ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ರವಿ ಜಿ., ಎನ್.ಎಸ್.ಎಸ್. ವಿದ್ಯಾರ್ಥಿ ಪ್ರತಿನಿಧಿಗಳಾದ ಧೀರಜ್, ಸಮಿಯಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸುಜಲ್ ಸ್ವಾಗತಿಸಿ, ಮಾನ್ಯ ವಂದಿಸಿ, ಹಯತ್ ಹಾಗೂ ಶ್ವೇತಾ ಕಾರ್ಯಕ್ರಮ ನಿರೂಪಿಸಿದರು.