ಮೈಸೂರು, ಆ. 30: ಕರ್ನಾಟಕದಲ್ಲಿನ ಅಭಿವೃದ್ಧಿ ಕಾರ್ಯಗಳು ದೇಶಾದ್ಯಂತ ಪ್ರತಿಧ್ವನಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಮೈಸೂರಿನಲ್ಲಿ ಬುಧವಾರ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ‘ಗೃಹಲಕ್ಷ್ಮಿ ಯೋಜನೆಯು ಅತ್ಯಂತ ದೊಡ್ಡ ಯೋಜನೆ. 2 ಸಾವಿರ ರೂ ಸಣ್ಣದಲ್ಲ. ಅದು ಮಹಿಳೆಗೆ ಎಲ್ಲಾ ರೀತಿಯಲ್ಲಿ ಸಂರಕ್ಷಣೆ ನೀಡುತ್ತದೆ. ಬಡವರಿಗಾಗಿ ಸರ್ಕಾರಗಳು ಕೆಲಸ ಮಾಡಬೇಕು. ಜಾತಿ, ಧರ್ಮ ಮೀರಿ ನೆರವಾಗಬೇಕು. ರಾಜ್ಯದ ಯೋಜನೆಗಳನ್ನು ಇಡೀ ದೇಶದಲ್ಲಿ ಮಾದರಿಯಾಗಿ ಜಾರಿಗೆ ತರಲಾಗುವುದು ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂತಾದವರಿದ್ದರು.