ಉಡುಪಿ, ಸೆ. 1: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿನೇವಾ ಒಪ್ಪಂದ ದಿನಾಚರಣೆ ಅಂಗವಾಗಿ ನಿಧಿ ಸಂಗ್ರಹಣಾ ಜಾಥಾ ಹಾಗೂ ನೆರೆ ಸಂತ್ರಸ್ತರಿಗೆ ಅಗತ್ಯ ಕಿಟ್ ವಿತರಣಾ ಸಮಾರಂಭದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಫಲಾನುಭವಿಗಳಿಗೆ ಪರಿಹಾರದ ಕಿಟ್ ವಿತರಿಸಿದರು.
ಜಿಲ್ಲಾ ಕ್ರೀಡಾಂಗಣದಿಂದ ಶ್ರೀ ಕೃಷ್ಣಮಠದ ರಾಜಾಂಗಣದವರೆಗೆ ಸಾಗಿದ ನಿಧಿ ಸಂಗ್ರಹಣಾ ಜಾಥಾಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಚಾಲನೆ ನೀಡಿದರು. ರೆಡ್‌ಕ್ರಾಸ್ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ರೆಡ್‌ಕ್ರಾಸ್‌ನ ಸಿಬ್ಬಂದಿಗಳು, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.