ಬೆಂಗಳೂರು, ಸೆ. 1: ಚುನಾವಣಾ ನಾಮಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ, ಹೈಕೋರ್ಟ್ ಆದೇಶಿಸಿದೆ. ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಹಾಸನ ಲೋಕಸಭಾ ಸದಸ್ಯರಾಗಿದ್ದ ಪ್ರಜ್ವಲ್ ರೇವಣ್ಣ ಅವರನ್ನು 4 ವರ್ಷಗಳ ಬಳಿಕ ಚುನಾವಣೆ ಸಂದರ್ಭದಲ್ಲಿ ಆಸ್ತಿ ವಿವರ ಸಲ್ಲಿಸುವಾಗ ತಪ್ಪು ಮಾಹಿತಿ ನೀಡಿದ ಕಾರಣಕ್ಕಾಗಿ ಹೈಕೋರ್ಟ್ ನ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠವು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶಿಸಿದೆ.
ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ
ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ
Date: