Tuesday, November 26, 2024
Tuesday, November 26, 2024

ಧರ್ಮವನ್ನು ರಕ್ಷಿಸುವ ಕೆಲಸ ನಮ್ಮಿಂದಾಗಲಿ: ಕೆ. ಜಯಪ್ರಕಾಶ್ ಹೆಗ್ಡೆ

ಧರ್ಮವನ್ನು ರಕ್ಷಿಸುವ ಕೆಲಸ ನಮ್ಮಿಂದಾಗಲಿ: ಕೆ. ಜಯಪ್ರಕಾಶ್ ಹೆಗ್ಡೆ

Date:

ಉಡುಪಿ, ಸೆ.6: ಶ್ರೀಕೃಷ್ಣ ಮಠ ಹಾಗೂ ಇಲ್ಲಿನ ಕನಕನ ಕಿಂಡಿಯಿಂದಾಗಿ ಉಡುಪಿ ಜಿಲ್ಲೆಯು ವಿಶ್ವವ್ಯಾಪಿ ಹೆಸರುವಾಸಿಯಾಗಿದೆ. ದಯೆಯೇ ಧರ್ಮದ ಮೂಲ. ಧರ್ಮವನ್ನು ದಯೆಯ ಮೂಲಕ ಹುಡುಕಬೇಕು. ಧರ್ಮವನ್ನು ರಕ್ಷಣೆ ಮಾಡುವ ಕೆಲಸ ನಮ್ಮಿಂದಾಗಬೇಕು. ಕನಕದಾಸರ ಕೀರ್ತನೆಯಲ್ಲಿರುವ ಸಾರದಂತೆ ಸಮಾಜದಲ್ಲಿ ನಾಗರೀಕರು ಕುಲ-ಕುಲವೆಂದು ಹೊಡೆದಾಡದೇ, ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬದುಕಿ ಬಾಳಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಬುಧವಾರ ನಗರದ ವಳಕಾಡು ಸರಕಾರಿ ಪ್ರೌಢಶಾಲೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಕೃಷ್ಣನ ಸಂದೇಶಗಳ ಆಕರ್ಷಣೆಗೆ ಒಳಗಾಗಿ ದೇಶ-ವಿದೇಶಗಳಲ್ಲಿ ಸಾಕಷ್ಟು ಮಂದಿ ಶ್ರೀಕೃಷ್ಣನ ಭಕ್ತರಿದ್ದಾರೆ. ನಮಗಿಂತ ಮುಂದಿರುವವರೊಂದಿಗೆ ಸ್ಫರ್ಧೆ ಮಾಡುವ ಹಾಗೂ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಭಾವನೆಯನ್ನು ಪೋಷಕರು ಮಕ್ಕಳಲ್ಲಿ ಬೆಳೆಸಬೇಕು ಇದರಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ನಾವು ಬೆಳೆದು ಬಂದಂತಹ ಭೂತ, ವರ್ತಮಾನ ಹಾಗೂ ಭವಿಷ್ಯತ್ ಕಾಲದ ವಸ್ತು ಸ್ಥಿತಿಗಳ ಕುರಿತು ಮಕ್ಕಳಲ್ಲಿ ತಿಳಿ ಹೇಳಬೇಕು. ಶಾಲೆಯು ಮಕ್ಕಳಿಗೆ ಶಿಕ್ಷಣ ನೀಡಿದರೆ, ಸಂಸ್ಕಾರವನ್ನು ಪೋಷಕರು ಕಲಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್‌ಪಾಲ್ ಎ ಸುವರ್ಣ ಮಾತನಾಡಿ, ವಿಶ್ವದಲ್ಲಿಯೇ ಧಾರ್ಮಿಕತೆಗೆ ಉಡುಪಿ ಜಿಲ್ಲೆಯು ಹೆಸರುವಾಸಿಯಾಗಿದೆ. ದೇಶದೆಲ್ಲೆಡೆ ಶ್ರೀಕೃಷ್ಣ ಜಯಂತಿಯನ್ನು ಸಡಗರಿಂದ ಆಚರಿಸುತ್ತಿದ್ದು, ಜಿಲ್ಲೆಯಲ್ಲಿ ಶ್ರೀಕೃಷ್ಣ ಜಯಂತಿಯನ್ನು ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ. ವಿವಿಧೆಡೆ ಸಂಘ-ಸಂಸ್ಥೆಗಳು, ಮಠ-ಮಂದಿರಗಳು, ಭಜನಾ ಮಂಡಳಿಗಳು ತಂಡಗಳನ್ನು ರಚಿಸಿ, ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆ, ಮುದ್ದು ರಾಧೆ ಸ್ಪರ್ಧೆ ಹಾಗೂ ಜಿಲ್ಲೆಯ ಸಾಂಪ್ರದಾಯಿಕ ಕಲೆಯಾದ ಹುಲಿ ವೇಷದಾರಿಯವರು ಮಾಡುವ ಹುಲಿ ಕುಣಿತಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ. ಕಲೆಯನ್ನು ಉಳಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಮಕ್ಕಳಿಗೆ ಹುಲಿ ಕುಣಿತ ಸ್ಫರ್ದೆಯನ್ನು ಆಯೋಜಿಸಲು ಕ್ರಮವಹಿಸಿದ್ದಲ್ಲಿ, ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಮಾತನಾಡಿ, ಭಗವಂತನ ಸ್ವರೂಪಿ ಶ್ರೀಕೃಷ್ಣ. ಅವರ ಕುರಿತು ವರ್ಣನೆ ಅಸಾಧ್ಯ. ಈ ಹಬ್ಬದ ಆಚರಣೆ ಸಂದರ್ಭದಲ್ಲಿ ಪೋಷಕರು ಮಕ್ಕಳಿಗೆ ಕೃಷ್ಣ ವೇಷವನ್ನು ಧರಿಸಿ, ಶ್ರೀ ಕೃಷ್ಣನ ಸ್ವರೂಪಿಯಾಗಿ ಮಕ್ಕಳನ್ನು ಕಾಣುತ್ತಾರೆ. ಶ್ರೀಕೃಷ್ಣನು ಪ್ರತಿಯೊಂದು ಕಾಲಘಟ್ಟದಲ್ಲಿ ಸಾಕಷ್ಟು ಸಂದೇಶಗಳನ್ನು ನೀಡಿದ್ದಾರೆ. ಕೃಷ್ಣನ ಸಂದೇಶಗಳನ್ನು ಆಧುನಿಕ ಜೀವನದಲ್ಲಿ ಸಂದರ್ಭಕ್ಕೆ ಅನುಗುಣವಾಗಿ ಅಳವಡಿಸಿಕೊಂಡಾಗ ನಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ. ಭಗವದ್ಗೀತೆಯ ಮೂಲಕ ಶ್ರೀ ಕೃಷ್ಣ ಸಾರಿರುವ ಸಂದೇಶಗಳು ಸರ್ವಕಾಲಕ್ಕೂ ವಿಶ್ವಕ್ಕೆ ಪ್ರಸ್ತುತ ಎಂದರು. ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಉಪನ್ಯಾಸ ನೀಡಿದರು.

ಪಾಡಿಗಾರ್ ಲಕ್ಷ್ಮೀನಾರಾಯಣ ಉಪಾಧ್ಯ ಮತು ಬಳಗದ ವತಿಯಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಮುದ್ದುಕೃಷ್ಣ ವೇಷದ ಸ್ಫರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಅಭಿನಂದನಾ ಪತ್ರವನ್ನು ವಿತರಿಸಲಾಯಿತು. ದರ್ಪಣ ಮಹಿಳಾ ಹುಲಿ ತಂಡದವರು ಹುಲಿ ಕುಣಿತ ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ನಗರಸಭೆ ಸದಸ್ಯೆ ರಜನಿ ಹೆಬ್ಬಾರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಜಿಲ್ಲಾ ಯಾದವ ಗೊಲ್ಲ ಸಮಾಜ ಸಂಘದ ಅಧ್ಯಕ್ಷ ದಯಾನಂದ ಬಿ.ಆರ್., ಶಾಲೆಯ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಉಪನ್ಯಾಸಕ ರಾಮಾಂಜಿ ನಿರೂಪಿಸಿದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!