Monday, November 25, 2024
Monday, November 25, 2024

ಪರಿಣಾಮಕಾರಿ ಮಿಷನ್ ಇಂದ್ರಧನುಷ್ ಕಾರ್ಯಕ್ರಮ ಉದ್ಘಾಟನೆ

ಪರಿಣಾಮಕಾರಿ ಮಿಷನ್ ಇಂದ್ರಧನುಷ್ ಕಾರ್ಯಕ್ರಮ ಉದ್ಘಾಟನೆ

Date:

ಉಡುಪಿ, ಸೆ.11: ಸೆ.11 ರಿಂದ 16 ರವರೆಗೆ ನಡೆಯುವ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾ ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಾಸಕ ಯಶ್ಪಾಲ್ ಸುವರ್ಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ಮಿಷನ್ ಇಂದ್ರಧನುಷ್ ಅವಧಿಯಲ್ಲಿ, ಜಿಲ್ಲೆಯ 0-5 ವರ್ಷದೊಳಗಿನ ಮಕ್ಕಳು ಹಾಗೂ ಗರ್ಭಿಣಿಯರು, ಲಸಿಕೆ ವಂಚಿತ ಮಕ್ಕಳು ದಡಾರ ರುಬೆಲ್ಲಾ ಇನ್ನಿತರ ನಿಗದಿತ ಲಸಿಕೆ ಪಡೆದು ಆರೋಗ್ಯವಂತ ಜಿಲ್ಲೆಯನ್ನಾಗಿಸಲು ಹಾಗೂ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು. ಜಿಲ್ಲಾಧಿಕಾರಿ ಡಾ ವಿದ್ಯಾ ಕುಮಾರಿ ಮಾತನಾಡಿ, ಲಸಿಕೆಯ ಮಹತ್ವವನ್ನು ಅರಿತು ಲಸಿಕೆವಂಚಿತ ಮಕ್ಕಳು ಎರಡನೇ ಸುತ್ತಿನ ಪರಿಣಾಮಕಾರಿ ಮಿಷನ್ ಇಂದ್ರಧನುಷ್ ಲಸಿಕಾ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ತಿಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಇತರೆ ಇಲಾಖೆಗಳ ಸಹಯೋಗದಲ್ಲಿ ಈ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಂಡು ಸ್ಥಸ್ಥ ಸಮಾಜದ ನಿರ್ಮಾಣಕ್ಕೆ ಸಹಕರಿಸುವಂತೆ ಹೇಳಿದರು.

ನಗರಸಭಾ ಸದಸ್ಯರು, ರೋಟರಿ ಅಧಿಕಾರಿಗಳು, ಉಡುಪಿ ನಗರಸಭಾ ಆಯುಕ್ತರು, ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿಗಳು, ಜಿಲ್ಲಾ ಸರ್ಜನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು,ಡಿಪಿಸಿ-ಆರ್.ಸಿ.ಹೆಚ್, ಎಮ್.& ಇ ವ್ಯವಸ್ಥಾಪಕರು, ವಿಸಿಸಿಎಮ್, ಐಎಫ್.ವಿ ಮತ್ತು ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!