ಉಡುಪಿ, ಸೆ.18: ಉಡುಪಿ ನಗರಸಭೆ ಹಾಗೂ ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಉಡುಪಿ ಇವರ ಸಹಯೋಗದಲ್ಲಿ ಹಸಿತ್ಯಾಜ್ಯ ಮತ್ತು ಒಣ ತ್ಯಾಜ್ಯಗಳ ವೈಜ್ಞಾನಿಕ ನಿರ್ವಹಣೆ ಹಾಗೂ ಮಳೆ ನೀರು ಸಂರಕ್ಷಣೆ ಮತ್ತು ಜಲ ಮರು ಹೂರಣ ಪ್ರಾಮುಖ್ಯತೆ ಕುರಿತು ಜಾಗೃತಿ ಕಾರ್ಯಾಗಾರವು ಗುರುವಾರ ನಗರದ ಅಜ್ಜರಕಾಡು ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ನಡೆಯಿತು. ನಗರಸಭೆ ಪೌರಾಯುಕ್ತ ರಾಯಪ್ಪ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಹಸಿತ್ಯಾಜ್ಯ ಮತ್ತು ಒಣ ತ್ಯಾಜ್ಯಗಳ ವೈಜ್ಞಾನಿಕ ನಿರ್ವಹಣೆ ಕುರಿತು ಮಾಹಿತಿಯನ್ನು ನೀಡಿದರು.
ಉಡುಪಿ ನಗರಸಭೆಯ ಪರಿಸರ ಅಭಿಯಂತರರು, ವಿಧ್ಯಾರ್ಥಿನಿಯರಿಗೆ ಪ್ಲಾಸ್ಟಿಕ್‌ನಿಂದ ಆಗುವ ದುಷ್ಪರಿಣಾಮಗಳ ಮತ್ತು ನೈರ್ಮಲ್ಯದ ಬಗ್ಗೆ, ನಗರಸಭೆಯ ಸ್ವಚ್ಛತೆಯ ರಾಯಭಾರಿ ಜೋಸೆಫ್ ಜಿ ರೆಬೆಲ್ಲೋ ಮಳೆ ನೀರು ಸಂರಕ್ಷಣೆ ಮತ್ತು ಜಲ ಮರುಪೂರಣ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು. ಪ್ರಾಂಶುಪಾಲ ಪ್ರೊ. ಭಾಸ್ಕರ್ ಶೆಟ್ಟಿ, ಹಿರಿಯ ಆರೋಗ್ಯ ನಿರೀಕ್ಷಕರು, ಕಾಲೇಜಿನ ಸಿಬ್ಬಂದಿ ವರ್ಗದವರು, ಕಾಲೇಜಿನ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಭಾಗವಹಿಸಿದ್ದರು.