Tuesday, October 22, 2024
Tuesday, October 22, 2024

ಶಾಸಕರಿಂದ ಹತಾಶೆಯ ಹೇಳಿಕೆ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು

ಶಾಸಕರಿಂದ ಹತಾಶೆಯ ಹೇಳಿಕೆ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು

Date:

ಉಡುಪಿ, ಸೆ. 26: ರಾಜ್ಯ ಸರಕಾರ ಉಡುಪಿ ಜಿಲ್ಲೆಯನ್ನು ಕಡೆಗಣಿಸಿದೆ ಎಂಬ ಉಡುಪಿ ಶಾಸಕ ಯಶ್ಪಾಲ್ ಸುವರ್ಣರ ಹೇಳಿಕೆ ಬಾಲಿಷ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಕೇವಲ ಮೂರು ತಿಂಗಳು ಕಳೆದಿವೆ. ಈ ಅವಧಿಯಲ್ಲಿ ಸರ್ವಜನರನ್ನು ತಲುಪುವ ಐದು ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕನ್ನು ಈಗಾಗಲೇ ಕಾರ್ಯಗತಗೊಳಿಸಿದೆ. ಪ್ರತಿ ಜಿಲ್ಲೆಗಳಿಗೂ ಅಭಿವೃದ್ಧಿಗಾಗಿ ಅನುದಾನಗಳನ್ನು ಹಂತ ಹಂತವಾಗಿ ಬಿಡುಗಡೆಗೊಳಿಸುತ್ತಿದೆ. ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರುಗಳ ನೇತೃತ್ವದಲ್ಲಿ ಜನರ ಸಮಸ್ಯೆಗಳನ್ನು ಸ್ಪಂದಿಸಲು ಜನತಾದರ್ಶನ ಏರ್ಪಡಿಸುತ್ತಿದೆ. ಉಸ್ತುವಾರಿ ಸಚಿವರು ಹಲವಾರು ಬಾರಿ ಉಡುಪಿ ಬಂದು ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಹಾಗಾಗಿ ಸರಕಾರದಿಂದ ಜಿಲ್ಲೆಯ ಕಡೆಗಣನೆ ಎಂಬ ಹೇಳಿಕೆ ಹಾಸ್ಯಸ್ಪದ. ಶಾಸಕರು ಕೇವಲ ಮೂರು ತಿಂಗಳ ಮೊದಲ ತಮ್ಮ ಸರಕಾರದ ಕಾರ್ಯವೈಖರಿಯನ್ನು ಅವಲೋಕಿಸಲಿ. ಇಲಾಖಾವಾರು ಅಭಿವೃದ್ಧಿಗೆ ಬಿಜೆಪಿ ಸರಕಾರ ಬಿಡುಗಡೆಗೊಳಿಸಿದ ಅನುದಾನ ಎಷ್ಟು? ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ತಮ್ಮ ಸರಕಾರ ಕೈಗೊಂಡ ಕ್ರಮಗಳನ್ನು ಪರಿಶೀಲಿಸಲಿ. ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನಿರಂತರ ಜಿಲ್ಲೆಯ ಭೇಟಿ, ಜನಸ್ಪಂದನ, ಸರಕಾರಿ ಇಲಾಖೆಗಳಲ್ಲಿ ಕಡತಗಳ ತ್ವರಿತ ವಿಲವಾರಿಗೆ ಕ್ರಮ, ಇವುಗಳಿಂದ ಶಾಸಕರು ಹತಾಶಗೊಂಡಂತೆ ಕಾಣುತ್ತಿದೆ. ಅವರು ಅಸಹಾಯಕತೆಯಿಂದ ಈ ಹೇಳಿಕೆ ನೀಡಿರಬಹುದು ಎಂದು ಅಶೋಕ್ ಕುಮಾರ್ ಕೊಡವೂರು ಶಾಸಕ ಯಶ್ಪಾಲ್ ಸುವರ್ಣರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!