ಉಡುಪಿ, ಸೆ. 27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ರೋಯಲ್ ರೋಟರಿ ಬ್ರಹ್ಮಾವರ, ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಂ.ಸಿ. ಮಣಿಪಾಲ, ಪ್ರಜ್ಞಾ ಯುವಕ ಮಂಡಲ (ರಿ.), ಸರಕಾರಿ ಪದವಿಪೂರ್ವ ಕಾಲೇಜು ಗೋಳಿಯಂಗಡಿ, ತಾಲೂಕು ಆರೋಗ್ಯಾಧಿಕಾರಿ ಕಛೇರಿ ಉಡುಪಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಆವರ್ಸೆ ಇವರ ಸಹಭಾಗಿತ್ವದಲ್ಲಿ ಗೋಳಿಯಂಗಡಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೆಹರೂ ಯುವ ಕೇಂದ್ರದ ಪ್ರತಿನಿಧಿಗಳಿಗೆ ಒತ್ತಡ ನಿರ್ವಹಣೆ ಹಾಗೂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಕಾರ್ಯಗಾರ ನಡೆಯಿತು.
ಕೆ.ಎಂ.ಸಿ. ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಸಂಜಯ್ ಕಿಣಿ ಅವರು ಒತ್ತಡ ನಿರ್ವಹಣೆಯ ಕುರಿತು ಮಾಹಿತಿ ನೀಡಿದರು. ಪ್ರಭಾರ ತಾಲೂಕು ಆರೋಗ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ರಾವ್ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ವೈದ್ಯ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರಜ್ಞಾ ಶರ್ಮಾ, ಜಿಲ್ಲಾ ಶಿಕ್ಷಣಾಧಿಕಾರಿ ಶಶಿಧರ್ ಹಾಗೂ ಪ್ರಜ್ಞಾ ಯುವಕ ಮಂಡಲದ ಕಾರ್ಯದರ್ಶಿ ಚಂದ್ರ ನಾಯಕ್ ಉಪಸ್ಥಿತರಿದ್ದರು.