Monday, November 25, 2024
Monday, November 25, 2024

ಕಾವೇರಿ ಬಿಸಿ: ಸಂಕಷ್ಟದ ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಕಾನೂನು ತಜ್ಞರ ಜತೆ ಸಿಎಂ ಚರ್ಚೆ

ಕಾವೇರಿ ಬಿಸಿ: ಸಂಕಷ್ಟದ ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಕಾನೂನು ತಜ್ಞರ ಜತೆ ಸಿಎಂ ಚರ್ಚೆ

Date:

ಬೆಂಗಳೂರು, ಸೆ. 29: ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು (ಸಿ.ಡಬ್ಲ್ಯೂ. ಎಂ.ಎ) ಅದೇಶಿಸಿರುವ ಹಿನ್ನೆಲೆಯಲ್ಲಿ ಎದುರಾಗಿರುವ ಸಂಕಷ್ಟದ ಪರಿಸ್ಥಿತಿಯನ್ನು ನಿರ್ವಹಿಸುವ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ಅಡ್ವೊಕೇಟ್ ಜನರಲ್ ಗಳ ಜತೆ ಸುದೀರ್ಘ ಚರ್ಚೆ ನಡೆಸಿದರು.

ಸಭೆಯಲ್ಲಿ ನ್ಯಾಯಮೂರ್ತಿಗಳಾದ ಎಂ.ಎನ್ ವೆಂಕಟಾಚಲಯ್ಯ, ಶಿವರಾಜ ಪಾಟೀಲ್, ವಿ. ಗೋಪಾಲಗೌಡ, ಆರ್.ವಿ ರವೀಂದ್ರನ್, ಪಿ. ವಿಶ್ವನಾಥಶೆಟ್ಟಿ, ಎ.ಎನ್ ವೇಣುಗೋಪಾಲಗೌಡ, ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಎಚ್. ಕೆ ಪಾಟೀಲ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್, ರಾಜಕೀಯ ಸಲಹೆಗಾರರಾದ ನಸೀರ್ ಅಹ್ಮದ್, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮಾಜಿ ಅಡ್ವೋಕೇಟ್ ಜನರಲ್ ಗಳಾದ ಬಿ.ವಿ ಆಚಾರ್ಯ, ಮಧುಸೂದನ್ ನಾಯಕ್, ವಿಜಯಶಂಕರ್, ಉದಯ್ ಹೊಳ್ಳ, ಪ್ರೊ ರವಿವರ್ಮಕುಮಾರ್, ಪ್ರಭುಲಿಂಗ ನಾವದಗಿ ಹಾಗೂ ಕಾನೂನು, ಜಲ ಸಂಪನ್ಮೂಲ ಇಲಾಖೆ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!