Sunday, November 24, 2024
Sunday, November 24, 2024

ಪರಿಣಾಮಕಾರಿ ಮಿಷನ್ ಇಂದ್ರಧನುಷ್ ಮೂರನೇ ಸುತ್ತಿನ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಪರಿಣಾಮಕಾರಿ ಮಿಷನ್ ಇಂದ್ರಧನುಷ್ ಮೂರನೇ ಸುತ್ತಿನ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

Date:

ಉಡುಪಿ, ಅ.9: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 0-5 ವರ್ಷದೊಳಗಿನ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾ ಅಭಿಯಾನದ ಮೂರನೇ ಸುತ್ತು ಜಿಲ್ಲೆಯಲ್ಲಿ ಅ. 9 ರಿಂದ 14 ರ ವರೆಗೆ ನಡೆಯಲಿದ್ದು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್, ಇಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನೆರವೇರಿಸಿ, ಲಸಿಕೆ ವಂಚಿತ ಮಕ್ಕಳು ದಡಾರ, ರುಬೆಲ್ಲಾ ಇನ್ನಿತರ ನಿಗದಿತ ಲಸಿಕೆ ಪಡೆದು ದಡಾರ ರುಬೆಲ್ಲಾ ನಿವಾರಣೆಯತ್ತ ದಿಟ್ಟ ಹೆಜ್ಜೆಯನ್ನಿಟ್ಟು ಉಡುಪಿ ಜಿಲ್ಲೆಯನ್ನು ಆರೋಗ್ಯವಂತ ಜಿಲ್ಲೆಯನ್ನಾಗಿಸಲು ಪ್ರಯತ್ನಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಡಿ.ಡಿ.ಪಿ.ಐ ಗಣಪತಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮ್‌ರಾವ್ ಕೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ವೇಣುಗೋಪಾಲ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಡಿಪಿಸಿ-ಆರ್.ಸಿ.ಹೆಚ್, ಎಮ್&ಇ ವ್ಯವಸ್ಥಾಪಕರು, ವಿಸಿಸಿಎಮ್, ಐ.ಎಫ್.ವಿ ಮತ್ತು ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪ್ರಭಾರ ಆರ್.ಸಿ.ಹೆಚ್ ಅಧಿಕಾರಿ ಡಾ.ಪ್ರಶಾಂತ್ ಭಟ್ ಸ್ವಾಗತಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!