ಉಡುಪಿ, ಅ.10: ಉಡುಪಿ ತಾಲೂಕಿನಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಶನಿವಾರ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಮಂದಾರ್ತಿ ಪರಿಸರದಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ದಾಳಿ ನಡೆಸಿ ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 22 ಪ್ರಕರಣ ದಾಖಲಿಸಿ 3600 ರೂ. ದಂಡ ವಸೂಲಿ ಮಾಡಲಾಯಿತು. ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಆರೋಗ್ಯ ನಿರೀಕ್ಷಣಾಧಿಕಾರಿ ರಕ್ಷಿತ್, ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ, ಬ್ರಹ್ಮಾವರ ಠಾಣೆಯ ಶಾಂಭವಿ, ರಂಜಿತ್.ಡಿ ಹಾಗೂ ಎನ್.ಟಿ.ಸಿ.ಪಿ ವಿಭಾಗದ ಸಾಮಾಜಿಕ ಕಾರ್ಯಕರ್ತೆ ಶೈಲಾ ಶ್ಯಾಮನೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕೋಟ್ಪಾ ದಳದಿಂದ ದಾಳಿ: ದಂಡ ವಸೂಲಿ
ಕೋಟ್ಪಾ ದಳದಿಂದ ದಾಳಿ: ದಂಡ ವಸೂಲಿ
Date: