ಉಡುಪಿ, ಅ.10: ಕರ್ನಾಟಕ ಉಪ್ಪಾರ ಅಬಿವೃದ್ಧಿ ನಿಗಮ (ನಿ) ದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಬ್ಯಾಂಕ್ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಸ್ವಾವಲಂಭಿ ಸಾರಥಿ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ನಡಿ ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜೀ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ http://upparadevelopment.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿ ದೂ.ಸಂಖ್ಯೆ: 080-22252555 ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಉಡುಪಿ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮದ (ನಿ)ದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ (ಹೊಸತು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ನಡಿ ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜೀ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಸಾಲ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ http://www.kmmd.karnataka.gov.inಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸಂಖ್ಯೆ: 080-22374832, 8050770004 ಅಥವಾ 8050770005 ಹಾಗೂ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ನಡಿ ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜೀ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಅರ್ಹ ಫಲಾಪೇಕ್ಷಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇರುವುದಿಲ್ಲ. ಇನ್ನುಳಿದ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ http://www.kaad.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿ ದೂ.ಸಂಖ್ಯೆ: 080-22374832, 8050770005 ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.