Monday, November 25, 2024
Monday, November 25, 2024

ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಸಾಲ ಸೌಲಭ್ಯ: ಅರ್ಜಿ ಆಹ್ವಾನ

Date:

ಉಡುಪಿ, ಅ.12: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಯೋಜನೆಗಳಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕ್‌ಗಳ ಸಜಹಯೋಗದೊಂದಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್‌ ನಡಿ ಬೆಂಗಳೂರು-ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೆಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://www.kssd.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸಂಖ್ಯೆ:080-22374832 ಅಥವಾ 805077005, 805077004 ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಉಡುಪಿ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://www.dbcdc.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832 ಮತ್ತು 8050770004, 8050770005 ಅಥವಾ 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!