Monday, November 25, 2024
Monday, November 25, 2024

ಸಮರ್ಥ ನಾಯಕತ್ವದಿಂದ ಯುವಶಕ್ತಿಯ ಸದ್ವಿನಿಯೋಗ: ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು

ಸಮರ್ಥ ನಾಯಕತ್ವದಿಂದ ಯುವಶಕ್ತಿಯ ಸದ್ವಿನಿಯೋಗ: ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು

Date:

ಉಡುಪಿ, ಅ.15: ವಿದ್ಯಾರ್ಥಿಗಳಲ್ಲಿ ಇರುವ ಸಮರ್ಥ ನಾಯಕತ್ವದ ಗುಣವು ಸಮಸ್ತ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ದಾರದೀಪವಾಗುವುದು. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಂಸ್ಥೆಯನ್ನು, ಸಮಾಜವನ್ನು ಬೆಳೆಸುವಂತಾಗಲಿ ಎಂದು ಉಡುಪಿ ಶ್ರೀ ಅದಮಾರು ಮಠದ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು. ಅವರು ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿಯ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಆಶೀರ್ವದಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ರಾಷ್ಟ್ರಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ರಾಜೇಂದ್ರ ಭಟ್ ಮಾತನಾಡುತ್ತಾ, ಭಾರತದ ಅದ್ಭುತ ಅಂತಃಸತ್ವಕ್ಕೆ ಯುವಸಮೂಹವೇ ಪ್ರೇರಣಾ ಶಕ್ತಿಯಾಗಲಿ. ಶೇಕಡಾ ೬೦ಕ್ಕಿಂತಲೂ ಹೆಚ್ಚು ಯುವಶಕ್ತಿಯನ್ನು ಹೊಂದಿದ ನಮ್ಮ ದೇಶ ಭಾರತ, ಆಧುನಿಕ ಜಗತ್ತಿನ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸುತ್ತಾ ಮುನ್ನುಗ್ಗುತ್ತಿದೆ. ಸಂವೇದನಾಶೀಲತೆ ಹಾಗೂ ಮೌಲ್ಯಗಳನ್ನು ಒಳಗೊಂಡ ನಮ್ಮ ಯುವಜನತೆ ಭಾರತವನ್ನು ಮತ್ತೆ ವಿಶ್ವಗುರುವನ್ನಾಗಿಸಲಿ ಎಂದು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿಗಳಾದ ಸಿ.ಎ.ಟಿ ಪ್ರಶಾಂತ್ ಹೊಳ್ಳ ವಹಿಸಿದ್ದರು. ಪ್ರಾಂಶುಪಾಲರಾದ ಡಾ.ಸುಕನ್ಯಾ ಮೇರಿ ಜೆ ಅವರು ವಿದ್ಯಾರ್ಥಿ ನಾಯಕರುಗಳಿಗೆ ಪ್ರಮಾಣ ವಚನ ಬೋಧಿಸಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಪ್ರೊ.ಚಂದ್ರಕಾಂತ್ ಭಟ್ ಹಾಗೂ ಲವಿಟಾ ಡಿಸೋಜ, ಹಾಗೂ ಉಪಪ್ರಾಂಶುಪಲರಾದ ವಿನಾಯಕ್ ಪೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ನಾಯಕಿಯಾಗಿ ಸೌಜನ್ಯ, ಪದಾಧಿಕಾರಿಗಳಾಗಿ ವಿದ್ಯಾ, ಸುಮಂತ್, ಶಶಿಕಿರಣ್ ಇವರು ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊ.ಚಂದ್ರಕಾಂತ್ ಭಟ್ ಸ್ವಾಗತಿಸಿ, ಸೌಜನ್ಯ ವಂದಿಸಿದರು‌. ದೀಪಕ್ ಕಾಮತ್ ಎಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!