Tuesday, November 26, 2024
Tuesday, November 26, 2024

ಡಿಸೆಂಬರ್ ಒಳಗಾಗಿ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಡಿಸೆಂಬರ್ ಒಳಗಾಗಿ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Date:

ಉಡುಪಿ, ಅ.18: ಪ್ರತಿಯೊಬ್ಬ ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದಲ್ಲಿ ರಸ್ತೆ ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಾರ್ವಜನಿಕರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅಗತ್ಯವಿರುವ ರಸ್ತೆ ಸುಧಾರಣಾ ಮೂಲಭೂತ ಕಾಮಗಾರಿಗಳನ್ನು ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಅಪಘಾತ ಪ್ರಮಾಣವನ್ನು ಅತ್ಯಂತ ಕಡಿಮೆಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಈಗಾಗಲೇ 30 ಕ್ಕೂ ಹೆಚ್ಚು ಅಪಘಾತ ವಲಯ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳು ತತ್‌ಕ್ಷಣದಲ್ಲಿಯೇ ಸುರಕ್ಷಿತಾ ಸೌಕರ್ಯಗಳ ಕಾರ್ಯಗಳನ್ನು ವೈಜ್ಞಾನಿಕವಾಗಿ ಕೈಗೊಂಡು ಅಪಘಾತಗಳನ್ನು ತಪ್ಪಿಸಲು ಮುಂದಾಗಬೇಕು ಎಂದರು. ಇಂದ್ರಾಳಿ ರೈಲ್ವೆ ಮೇಲು ಸೇತುವೆ ಮೇಲಿನ ರಸ್ತೆ ಆಭಿವೃಧ್ದಿ ಕಾಮಗಾರಿಗಳನ್ನು ಮುಂಬರುವ ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಈ ಬಗ್ಗೆ ರೈಲ್ವೇ ಇಲಾಖೆಯ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು. ಇಂದ್ರಾಳಿಯ ರೈಲ್ವೆ ಮೇಲ್ಸೇತುವೆಯ ಎರಡೂ ಭಾಗದ 100 ಮೀ. ವ್ಯಾಪ್ತಿಯಲ್ಲಿ ಯಾವುದೇ ಬಸ್‌ಗಳು ನಿಲ್ಲಿಸದಂತೆ ಕ್ರಮ ವಹಿಸಬೇಕು. ಬಸ್‌ಗಳ ನಿಲುಗಡೆಯಿಂದ ವಾಹನ ಸುಗಮ ಸಂಚಾರಕ್ಕೆ ತೊಂದರೆಯಾಗುವುದರ ಜೊತೆಗೆ ರಸ್ತೆ ಅಪಘಾತಗಳು ಆಗುವ ಸಾಧ್ಯತೆಗಳಿವೆ ಎಂದರು. ರಸ್ತೆಯ ಬದಿಯ ಖಾಲಿ ಸ್ಥಳಗಳಲ್ಲಿ ಗಿಡ ಮರಗಳನ್ನು ನೆಡಲು ಮಾರ್ಗಸೂಚಿಗಳನ್ನು ರಚಿಸಿ, ಗಿಡ ಮರಗಳನ್ನು ನೆಡಬೇಕು ಎಂದ ಅವರು, ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿ ಮರ ಹಾಗೂ ಮರದ ರೆಂಬೆಗಳನ್ನು ತೆರವುಗೊಳಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್, ಪೌರಾಯುಕ್ತ ರಾಯಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಕ ಇಂಜಿನಿಯರ್ ದಿನೇಶ್ ಕೆ.ಎನ್, ರಾಷ್ಟ್ರೀಯ ಹೆದ್ದಾರಿ ಅಭಿಯಂತರ ಮಂಜುನಾಥ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!