Saturday, October 19, 2024
Saturday, October 19, 2024

ಕಚೇರಿಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲು ಸೂಚನೆ

ಕಚೇರಿಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲು ಸೂಚನೆ

Date:

ಉಡುಪಿ, ಅ.26: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಯಲು ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013 ಅಧಿನಿಯಮಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶದನ್ವಯ 10 ಅಥವಾ ಅದಕ್ಕಿಂತ ಹೆಚ್ಚು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ/ಖಾಸಗಿ ಕಛೇರಿಗಳು, ಕಾರ್ಖಾನೆಗಳು, ಗಾರ್ಮೆಂಟ್ಸ್ ಫ್ಯಾಕ್ಟರಿಗಳು, ವಿಶ್ವವಿದ್ಯಾಲಯಗಳು, ಸಂಘ-ಸಂಸ್ಥೆಗಳು ಹಾಗೂ ಜಿಲ್ಲೆ ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಬರುವ ಸರ್ಕಾರಿ/ಖಾಸಗಿ ಸಂಸ್ಥೆಗಳಲ್ಲಿ, ಉನ್ನತ ಮಟ್ಟದ ವೃತ್ತಿಪರರ ಶಾಸನಬದ್ದ ಸಂಸ್ಥೆಗಳು ಮತ್ತು ನಿಯಂತ್ರಿಸುವವರನ್ನು ಒಳಗೊಂಡಂತೆ (ವೈದ್ಯರು, ವಕೀಲರು, ವಾಸ್ತುಶಿಲ್ಪಿಗಳು, ಲೆಕ್ಕ ಪರಿಶೋಧಕರು, ವೆಚ್ಚ ಲೆಕ್ಕ ಪರಿಶೋಧಕರು, ಇಂಜಿನಿಯರ್‌ಗಳು, ಬ್ಯಾಂರ‍್ಸ್ ಮತ್ತು ಇತರೇ ವೃತ್ತಿಪರರು) ಆಂತರಿಕ ದೂರು ಸಮಿತಿಯನ್ನು ರಚಿಸುವುದು ಕಡ್ಡಾಯವಾಗಿರುತ್ತದೆ.

ಆಂತರಿಕ ದೂರು ಸಮಿತಿಯಲ್ಲಿ ಹಿರಿಯ ಮಹಿಳಾ ಅಧಿಕಾರಿಯನ್ನು ಅಧ್ಯಕ್ಷರನ್ನಾಗಿ ಹಾಗೂ ಸಮಿತಿಯ ಸದಸ್ಯರುಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳಿಗೆ ಸೇರಿದ ಸದಸ್ಯರು ಹಾಗೂ ಕಡ್ಡಾಯವಾಗಿ ಎನ್.ಜಿ.ಒ. ಪ್ರತಿನಿಧಿಯನ್ನು ನೇಮಿಸಿಕೊಳ್ಳಬೇಕು. ಸಮಿತಿಯ ಸದಸ್ಯರುಗಳಲ್ಲಿ ಒಬ್ಬರು ಕಾನೂನಿನ ಪರಿಣತರಾಗಿರಬೇಕು. ಪ್ರತಿ 3 ವರ್ಷಗಳಿಗೊಮ್ಮೆ ಆಂತರಿಕ ದೂರು ಸಮಿತಿಯನ್ನು ಪುನರ್‌ರಚಿಸಬೇಕು. ಆಂತರಿಕ ದೂರು ಸಮಿತಿಯನ್ನು ಕಡ್ಡಾಯವಾಗಿ ರಚಿಸಿ, ವರದಿಯನ್ನು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!