ಉಡುಪಿ, ಅ.26: ಜಿಲ್ಲಾ ಗೃಹರಕ್ಷಕದಳದಲ್ಲಿ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಇಚ್ಛಿಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 19 ರಿಂದ 50 ವರ್ಷದೊಳಗಿನ, ಕನಿಷ್ಠ 167 ಸೆಂ.ಮೀ ಎತ್ತರ ಇರುವ, ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾದೇಷ್ಟರ ಕಚೇರಿ, ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದ ಹತ್ತಿರ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820 2535650 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.