Saturday, October 19, 2024
Saturday, October 19, 2024

ಉಡುಪಿ: ಬ್ಯಾನರ್, ಕಟೌಟ್‌ಗಳಿಗೆ ಅನುಮತಿ ಕಡ್ಡಾಯ

ಉಡುಪಿ: ಬ್ಯಾನರ್, ಕಟೌಟ್‌ಗಳಿಗೆ ಅನುಮತಿ ಕಡ್ಡಾಯ

Date:

ಉಡುಪಿ, ಅ. 27: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಳವಡಿಸಲಾದ ಬ್ಯಾನರ್, ಬಂಟಿಂಗ್ಸ್, ಕಟೌಟ್‌ಗಳು ಅವಧಿ ಮೀರಿರುವುದು ಕಂಡುಬಂದಿದ್ದು, ಅಂತಹ ಬ್ಯಾನರ್‌ಗಳನ್ನು ಸಂಬಂಧಪಟ್ಟವರು ಕೂಡಲೇ ತೆರವುಗೊಳಿಸಬೇಕು. ಬ್ಯಾನರ‍್ಸ್ ಮತ್ತು ಕಟೌಟ್ ಇತರೆ ಅಳವಡಿಸುವ ಪೂರ್ವದಲ್ಲಿ ಕರ್ನಾಟಕ ಮುನಿಸಿಪಲ್ ಆಕ್ಟ್ನಂತೆ ನಗರಸಭೆ ಕಛೇರಿಯಿಂದ ಅನುಮತಿ ಪಡೆದುಕೊಂಡು ಪ್ರಾರಂಭ ದಿನಾಂಕ, ಮುಕ್ತಾಯ ದಿನಾಂಕ ಹಾಗೂ ಅನುಮತಿ ಪತ್ರ ಸಂಖ್ಯೆಯನ್ನು ನಮೂದಿಸಿ ಅಳವಡಿಸಬೇಕು ಹಾಗೂ ಗೋಡೆಗಳ ಮೇಲೆ ಸಾರ್ವಜನಿಕ ಭಿತ್ತಿಪತ್ರಗಳನ್ನು ಅಂಟಿಸಬಾರದು. ಅಂತಹ ಭಿತ್ತಿಪತ್ರಗಳನ್ನು ಅಂಟಿಸುವ ಮೊದಲು ಸೂಕ್ತ ಸ್ಥಳ ಗುರುತಿಸಿ ಅನುಮತಿ ಪಡೆದಕೊಂಡು ಅಂಟಿಸಬೇಕು.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಗೋಡೆಗಳ ಮೇಲೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಭಿತ್ತಿಪತ್ರಗಳನ್ನು ಅಂಟಿಸಿದ್ದಲ್ಲಿ ಯಾವುದೇ ಮುನ್ಸೂಚನೆ ನೀಡದೇ ತೆರವುಗೊಳಿಸಲಾಗುವುದು. ನಗರದ ಸೌಂದರ್ಯದ ಹಿತದೃಷ್ಟಿಯಿಂದ ವಿವಿಧೆಡೆ ಭಿತ್ತಿಪತ್ರ ಅಳವಡಿಸುವುದನ್ನು ಕಡಿಮೆ ಮಾಡಬೇಕು. ವಿದ್ಯುತ್ ಕಂಬಗಳ ಮೇಲೆ ಚಿಕ್ಕಚಿಕ್ಕ ಜಾಹೀರಾತು ಫಲಕಗಳನ್ನು ಅಳವಡಿಸಿರುವುದು ಕಂಡುಬಂದಿದ್ದು, ಇಂತಹ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗುವುದು. ಬ್ಯಾನರ್ಸ್/ಕಟೌಟ್‌ಗಳನ್ನು ಮುದ್ರಿಸುವ ಮಾಲೀಕರು ಈ ಬಗ್ಗೆ ನಗರಸಭೆಯಿಂದ ಅನುಮತಿಯನ್ನು ಪಡೆದುಕೊಂಡು ನಿಗದಿತ ಸ್ಥಳದಲ್ಲಿ ಅಳವಡಿಸಬೇಕು ಹಾಗೂ ಅವಧಿ ಪೂರ್ಣಗೊಂಡ ಕೂಡಲೇ ತೆರವುಗೊಳಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!