Friday, October 18, 2024
Friday, October 18, 2024

ಕಿರು ಆಹಾರ ಸಂಸ್ಕರಣ ಘಟಕ ಸ್ಥಾಪನೆಗೆ ಸಹಾಯಧನ: ಅರ್ಜಿ ಆಹ್ವಾನ

ಕಿರು ಆಹಾರ ಸಂಸ್ಕರಣ ಘಟಕ ಸ್ಥಾಪನೆಗೆ ಸಹಾಯಧನ: ಅರ್ಜಿ ಆಹ್ವಾನ

Date:

ಉಡುಪಿ, ಅ.31: ಜಿಲ್ಲೆಯ ಬ್ರಹ್ಮಾವರ ತಾಲೂಕಿನ, ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟ ಪಡುಕೆರೆ ಕಾಲೇಜಿನಲ್ಲಿ ಆಯೋಜಿಸಲಾದ ಮತ್ಸ್ಯ ಮೇಳ-2023 ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಘಟಕದ 500 ಹೊಸ ಘಟಕವನ್ನು ಸ್ಥಾಪಿಸಲು ಹಾಗೂ ಚಾಲ್ತಿಯಲ್ಲಿರುವ ಘಟಕಕ್ಕೂ ಸಹಾಯಧನ ಪಡೆಯುವ ಬಗ್ಗೆ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ವಿವೇಕ್ ಆರ್. ಪ್ರಸ್ತಾಪಿಸಿರುತ್ತಾರೆ. ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಘಟಕದಲ್ಲಿ ‘ಒಂದು ಜಿಲ್ಲೆ ಒಂದು ಉತ್ಪನ್ನ’ ಎಂಬ ಆಶಯದಡಿ ಮೀನಿನ ಮೌಲ್ಯವರ್ಧಿತ ಪದಾರ್ಥಗಳು ಮತ್ತು ಆದ್ಯತೆಯ ಮೇರೆಗೆ ಇತರ ಪದಾರ್ಥಗಳಾದ ತೆಂಗಿನ ಎಣ್ಣೆ ಘಟಕ, ಹಿಟ್ಟಿನ ಗಿರಣಿ, ಬೇಕರಿ ಉತ್ಪನ್ನ, ಮಸಾಲ ಪದಾರ್ಥಗಳು, ಹಪ್ಪಳ, ಸಂಡಿಗೆ, ಉಪ್ಪಿನಕಾಯಿ ಮತ್ತು ಮನುಷ್ಯರು ಹಾಗೂ ಪ್ರಾಣಿಗಳು ಸೇವಿಸುವ ಎಲ್ಲಾ ಸಂಸ್ಕರಿಸಿದ ಆಹಾರ ಪದಾರ್ಥಗಳಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಜಿಲ್ಲಾ ಸಂಪನ್ಮೂಲ ವ್ಯಕ್ತಿಗೆ ಮೊಬೈಲ್ ಮುಖಾಂತರ ಅಗತ್ಯ ದಾಖಲಾತಿಗಳನ್ನು ನೀಡಿ, ಬ್ಯಾಂಕ್ ಸಾಲದೊಂದಿಗೆ ಶೇ.50 ರಷ್ಟು ಸಹಾಯಧನವನ್ನು ಪಡೆಯಬಹುದು. ಆಸಕ್ತ ಉದ್ಯಮಿದಾರರು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸೂರಜ್ ಶೆಟ್ಟಿ ಮೊ: 9019075051 ಅನ್ನು ಸಂಪರ್ಕಿಸಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!