ಉಡುಪಿ ನ.1: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಹಾಗೂ ತ್ರಿಶಾ ವಿದ್ಯಾ ಪಿ.ಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂಗೀತ, ನೃತ್ಯ, ಭಾಷಣ ಹಾಗೂ ಕನ್ನಡದ ಇತಿಹಾಸವನ್ನು ಹೇಳಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿದರು. ನಂತರ ವನಸುಮ ವೇದಿಕೆ (ರಿ.) ಕಟಪಾಡಿ, ಕನ್ನಡ ಮತ್ತು ಸಂಸ್ಕ್ರತ ಇಲಾಖೆ ಬೆಂಗಳೂರು ಸಹಯೋಗದಲ್ಲಿ ‘ಸುವರ್ಣ ಕರ್ನಾಟಕ ಗೀತ ಗಾಯನ ಕಾರ್ಯಕ್ರಮ’ ಕಾಲೇಜಿನ ಆವರಣದಲ್ಲಿ ನಡೆಯಿತು.
ತ್ರಿಶಾ ಸಂಸ್ಥೆಗಳ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ ಭಟ್, ಸಿದ್ಧಾಂತ್ ಫೌಂಡೇಶನ್ ನ ಟ್ರಸ್ಟಿಯಾದ ನಮಿತಾ ಜಿ ಭಟ್, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಇಂದುರೀತಿ, ತ್ರಿಶಾ ವಿದ್ಯಾ ಪಿ.ಯು ಕಾಲೇಜಿನ ಪ್ರಾಂಶುಪಾಲರಾದ ಡಾ. ಅನಂತ್ ಪೈ, ಶಿಕ್ಷಕರು ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಮೀನಾಕ್ಷಿ ನಿರೂಪಿಸಿ, ರಾಮಣ್ಣ ಗೌಡ ಧನ್ಯವಾದ ವಂದಿಸಿದರು.