ಉಡುಪಿ, ನ.2: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಕಾರ್ಕಳ ತಾಲೂಕು ಘಟಕ ಹಾಗೂ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಹಯೋಗದೊಂದಿಗೆ 68ನೇ ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ನಾಮಕರಣಗೊಂಡು ಸ್ವರ್ಣ ಸಂಭ್ರಮದ ಅಂಗವಾಗಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ರಂಗಮಂದಿರದಲ್ಲಿ ಬುಧವಾರ ಜಿಲ್ಲಾಮಟ್ಟದ ಕವಿಗೋಷ್ಠಿ ನಡೆಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ ಅಧ್ಯಕ್ಷರಾದ ಕೊಂಡಳ್ಳಿ ಕನ್ನಡ ಭುವನೇಶ್ವರೀ ತಾಯಿಯ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಪುಷ್ಪರ್ಚನೆ ಸಲ್ಲಿಸಿ ಜಿಲ್ಲಾಮಟ್ಟದ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು. ಕನ್ನಡಾಭಿಮಾನ ಬೆಳೆಸಿಕೊಳ್ಳುವುದೆಂದರೆ ಇತರ ಭಾಷೆಗಳನ್ನು ದ್ವೇಷಿಸಬೇಕೆಂಬ ತಪ್ಪು ಕಲ್ಪನೆ ಸರಿಯಲ್ಲ. ಭಾರತದಂತಹ ವಿಶಾಲವಾದ ದೇಶದಲ್ಲಿ ರಾಜ್ಯಕ್ಕೊಂದು, ಜಿಲ್ಲೆಗೊಂದು ಭಾಷೆಗಳಿವೆ ಇಂತಹ ವೈವಿಧ್ಯಪೂರ್ಣ ದೇಶ ನಮ್ಮದು
ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತಿ ಹಾಗೂ ಬೆಳ್ಮಣ್ಣು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಶುಭಲಕ್ಷ್ಮಿ ಆರ್. ನಾಯಕ್ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ ಸಂಘಟನಾ ಕಾರ್ಯದರ್ಶಿ ಗಣೇಶ್ ಜಾಲ್ಸೂರು, ಗೌರವ ಕಾರ್ಯದರ್ಶಿ ದೇವದಾಸ್ ಕೆರೆಮನೆ ಭಾಗವಹಿಸಿದ್ದರು. ವೇದಿಕೆಯಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ಕಾರ್ಯದರ್ಶಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ ಉಪಸ್ಥಿತರಿದ್ದರು.
ಶೇಖರ್ ಅಜೆಕಾರು ಅವರಿಗೆ ಶ್ರದ್ದಾಂಜಲಿ: ಸಾಹಿತ್ಯ ಲೋಕದಲ್ಲಿ ಅಪಾರ ಸಾಧನೆ ಮಾಡಿದ, ಸಾಹಿತಿ, ಲೇಖಕ, ಪತ್ರಕರ್ತ, ಸಂಘಟಕ, ಬೆಳದಿಂಗಳ ಸಾಹಿತ್ಯ ಸಮ್ಮೇಳನದ ರೂವಾರಿ ಇತ್ತೀಚೆಗೆ ನಿಧನರಾದ ಶೇಖರ್ ಅಜೆಕಾರು ಅವರಿಗೆ ಈ ಸಂದರ್ಭದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕವಿಗೋಷ್ಠಿಯಲ್ಲಿ ದೇವದಾಸ್ ಕೆರೆಮನೆ ಕಾರ್ಕಳ, ಅಶ್ವಿನಿ. ಕೆ. ಹೆಬ್ರಿ, ಶೈಲಜಾ ಹೆಗ್ಡೆ ಕಾರ್ಕಳ, ಚಂದ್ರನಾಯ್ಕ್ ಟಿ. ನಿಟ್ಟೆ ಮಾಧವ ಅರ್ಕುಳ ಬೆಳ್ಮಣ್ಣು, ಶ್ರೇಯಾ ಬೇಲಾಡಿ, ಪ್ರಜ್ಞಾವಾಣಿ ಗೋರೆ ಮಾಳ-ಕಾರ್ಕಳ ಮಂಜುನಾಥ ಗುಂಡ್ಮಿ ಕುಂದಾಪುರ, ಸುಮತಿ ಪಿ. ಸಾಣೂರು ಜಿಲ್ಲಾಮಟ್ಟದ ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಸ್ವಾಗತಿಸಿ, ಅನ್ನಪೂರ್ಣ ಕಾಮತ್ ಹಾಗೂ ನಿಯಾ ಶೆಟ್ಟಿ ಕನ್ನಡ ಗೀತಾ ಗಾಯನಗೈದರು. ಹೆಬ್ರಿ ಅಮೃತಾ ಭಾರತಿ ಕಾಲೇಜಿನ ಉಪನ್ಯಾಸಕರಾದ ವೀಣೇಶ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಪೂರ್ವಾಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ ವಂದಿಸಿದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ನ ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ಉದಯ ಅಂಚನ್, ಉಪಾಧ್ಯಕ್ಷ ಬಾಲಕೃಷ್ಣ ಮಡಿವಾಳ, ಕೋಶಾಧಿಕಾರಿ ಆರತಿ ಕುಮಾರಿ, ಸದಸ್ಯರಾದ ಲೀಲಾ ಪೂಜಾರಿ, ಸಂಧ್ಯಾ ಶೆಟ್ಟಿ, ಹರಿಣಾಕ್ಷಿ ಪೂಜಾರಿ, ಸುಲೋಚನಾ ಕೋಟ್ಯಾನ್, ಕೀರ್ತನ್ ಪೂಜಾರಿ, ಸುರೇಶ್ ಅಬ್ಬನಡ್ಕ, ವೀಣಾ ಆಚಾರ್ಯ ಮೊದಲಾದವರಿದ್ದರು.