Sunday, November 24, 2024
Sunday, November 24, 2024

ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿ: ಧಾರವಾಡ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಘಟಕಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ

ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿ: ಧಾರವಾಡ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಘಟಕಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ

Date:

ಉಡುಪಿ, ನ.8: ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿಯ ಭಾಗವಾಗಿ ಧಾರವಾಡದ ಪದ್ಮಜಾ ಇಂಡಸ್ಟ್ರೀಸ್ ನಲ್ಲಿ ಸಿದ್ಧಗೊಳ್ಳುತ್ತಿರುವ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಘಟಕಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯವರ ಸೂಚನೆಯಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸ್ಟೀಲ್ ಬ್ರಿಡ್ಜ್ ನಿರ್ಮಾಣದ ಬಗ್ಗೆ ಸಮಾಲೋಚನೆ ನಡೆಸಿ ಶೀಘ್ರದಲ್ಲಿ ಹಸ್ತಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸುಮಾರು 5.20 ಕೋಟಿ ವೆಚ್ಚದಲ್ಲಿ 54 ಮೀಟರ್ ಉದ್ದ ಹಾಗೂ 12.5 ಮೀಟರ್ ಅಗಲದ 385 ಟನ್ ಸಾಮರ್ಥ್ಯದ ಸ್ಟೀಲ್ ಬ್ರಿಡ್ಜ್ ನ 60% ಕಾಮಗಾರಿ ಪೂರ್ಣಗೊಂಡಿದ್ದು, ಹದಿನೈದು ದಿನಗಳಲ್ಲಿ 80% ಪೂರ್ಣಗೊಂಡ ಬಳಿಕ ರೈಲ್ವೇ ಇಲಾಖೆಯ ತಾಂತ್ರಿಕ ವಿಭಾಗ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ ಬಳಿಕ ಡಿಸೆಂಬರ್ ಮೊದಲ ವಾರದಲ್ಲಿ ಇಂದ್ರಾಳಿಯಲ್ಲಿ ಸ್ಟೀಲ್ ಬ್ರಿಡ್ಜ್ ಅಳವಡಿಕೆ ಪ್ರಕ್ರಿಯೆ ನಡೆಯಲಿದ್ದು, ಆ ಬಳಿಕ ಸ್ಟೀಲ್ ಬ್ರಿಡ್ಜ್ ಮೇಲೆ 200 ಎಂ. ಎಂ. ಕಾಂಕ್ರಿಟೀಕರಣ ನಡೆಯಲಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಜನವರಿಯಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸುಗ್ಗಿ ಸುಧಾಕರ ಶೆಟ್ಟಿ, ಮಹೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!