Monday, November 25, 2024
Monday, November 25, 2024

ಯುವ ಸಂಸತ್‌ ಮೂಲಕ ಮಕ್ಕಳ ಪ್ರತಿಭೆ ಅನಾವರಣ

ಯುವ ಸಂಸತ್‌ ಮೂಲಕ ಮಕ್ಕಳ ಪ್ರತಿಭೆ ಅನಾವರಣ

Date:

ಉಡುಪಿ, ನ.10: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಹಾಗೂ ಅವರ ಆಲೋಚನೆಗಳನ್ನು ಮುಕ್ತವಾಗಿ ಚರ್ಚಿಸಲು ಯುವ ಸಂಸತ್ ಒಂದು ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ, ಜಿಲ್ಲಾ ಪಂಚಾಯತ್ ಮತ್ತು ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜನಪ್ರತಿನಿಧಿಗಳು ಜಿಲ್ಲೆಯ ಸಮಸ್ಯೆಗಳನ್ನು ಚರ್ಚಿಸಿ, ನಿರ್ಣಯ ಮಾಡಿ ಅಭಿವೃದ್ಧಿಪಡಿಸಲು ಹಲವು ವಿಚಾರಗಳನ್ನು ಅನುಷ್ಠಾನಗೊಳಿಸುವ ಈ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯುತ್ತಿರುವುದು ಸಂತಸದ ಸಂಗತಿ. ಯುವಸಂಸತ್ತಿನಲ್ಲಿ ಕುಳಿತು ಮಾತನಾಡುವಾಗ ವಿದ್ಯಾರ್ಥಿಗಳಲ್ಲಿ ಸ್ಪಷ್ಟತೆ ಹಾಗೂ ತಾಳ್ಮೆ ಇರಲಿ ಎಂದರು.

ದೇಶದ ಅಭಿವೃದ್ಧಿಯ ಬಗ್ಗೆ ಸಂಸತ್ತಿನ ವೇದಿಕೆಯಲ್ಲಿ ಚರ್ಚೆಗಳು ನಡೆಯಲಿದ್ದು, ಅಲ್ಲಿ ಕೇವಲ ಕಲಹಗಳೇ ನಡೆಯುವುದಿಲ್ಲ. ಗಂಭೀರ ವಿಚಾರಗಳನ್ನು ಚರ್ಚಿಸಲು ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ ಕಾನೂನುಗಳು ಇಲ್ಲಿ ರೂಪುಗೊಳ್ಳುತ್ತವೆ. ಯುವ ಸಂಸತ್ತಿನ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಗೆದ್ದವರು ರಾಜ್ಯಮಟ್ಟವನ್ನು ಪ್ರತಿನಿಧಿಸಲಿದ್ದು, ಅಲ್ಲಿಯೂ ವಿಜೇತರಾಗಿ ಉಡುಪಿ ಜಿಲ್ಲೆಗೆ ಕೀರ್ತಿ ತರುವಂತೆ ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇಂತಹ ಕಾರ್ಯಕ್ರಮಗಳಿಂದ ಅವರುಗಳಲ್ಲಿನ ಸಾಮಾನ್ಯ ಜ್ಞಾನ ಸುಧಾರಿಸುತ್ತದೆ. ಉತ್ತಮ ವಿಚಾರಗಳಿಂದ ಸಕಾರಾತ್ಮಕ ನಿರ್ಣಯಗಳನ್ನು ಕೈಗೊಂಡಾಗ ಜಿಲ್ಲೆ, ರಾಜ್ಯ ಹಾಗೂ ದೇಶ ಅಭಿವೃದಿಯಾಗಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿಡಿಪಿಐ ಗಣಪತಿ ಕೆ ಮಾತನಾಡಿ, ಮಕ್ಕಳಿಗೆ ಎಲ್ಲಾ ರೀತಿಯ ಅವಕಾಶ ಹಾಗೂ ಸೌಲಭ್ಯಗಳು ದೊರಕಬೇಕು ಎಂಬ ಹಿತದೃಷ್ಠಿಯಿಂದ ಇಲಾಖೆಯ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ, ಅವರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವದ ಆಶಯ ಹಾಗೂ ಮೌಲ್ಯಗಳ ಕುರಿತು ವಿದ್ಯಾರ್ಥಿ ಜೀವನದಿಂದಲೇ ಅರಿವು ಮೂಡಿಸಲು ಈ ಕಾರ್ಯಕ್ರಮ ನೆರವಾಗಲಿದೆ ಎಂದರು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಲು, ಕಲಾಪಗಳು ನಡೆಯುವ ಕುರಿತು ಅರಿವು ಮೂಡಿಸಲು ಹಾಗೂ ಪ್ರಚಲಿತ ವಿದ್ಯಮಾನಗಳ ಕುರಿತು ಚರ್ಚಿಸಲು ಇದೊಂದು ಉತ್ತಮ ವೇದಿಕೆಯಾಗಿದೆ. ಅವಕಾಶಗಳನ್ನು ಬಳಸಿಕೊಂಡು ಅವುಗಳಲ್ಲಿ ತೊಡಗಿಸಿಕೊಂಡಾಗ ಶಿಕ್ಷಣದ ಜೊತೆಗೆ ಉತ್ತಮ ಸತ್ಪ್ರಜೆಯಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದ ಅವರು, ಶಿಕ್ಷಕರುಗಳು ಶಾಲಾ ಹಂತಗಳಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಅವರಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಿ, ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸಲು ಸಹಕಾರ ನೀಡುತ್ತಿದ್ದಾರೆ ಎಂದರು.

ಲೀಡ್ ಬ್ಯಾಂಕ್ ಮ್ಯಾನೆಜರ್ ಪಿಂಜಾರ, ಹಣಕಾಸು ಸಲಹೆಗಾರ್ತಿ ಮೀರಾ ಕುಮಾರಿ, ಜಿಲ್ಲೆಯ ವಿವಿಧ ಪ್ರೌಢಶಾಲೆಗಳ ಶಿಕ್ಷಕರುಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಸಾಣೂರು ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಗಣೇಶ್ ಮೊಗವೀರ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!