ಬೆಂಗಳೂರು, ನ.10: ತಕ್ಷಣಕ್ಕೆ ಜಾರಿಗೆ ಬರುವಂತೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ನೇಮಕ ಮಾಡಿದ್ದಾರೆ.
ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ , ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾರವರಿಗೆ, ಗೃಹ ಸಚಿವ ಅಮಿತ್ ಶಾ, ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್. ಸಂತೋಷ್ ಅವರುಗಳಿಗೆ ತುಂಬು ಹೃದಯದ ಕೃತಜ್ಞತೆಗಳು. ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದು ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.