Saturday, October 19, 2024
Saturday, October 19, 2024

ಭಯವನ್ನು ಗೆಲ್ಲಲು ಪ್ರಯತ್ನಿಸಿದರೆ ಯಶಸ್ಸು ನಮ್ಮ ಕೈಯಲ್ಲಿ: ಗುರುರಾಜ್ ಸನಿಲ್

ಭಯವನ್ನು ಗೆಲ್ಲಲು ಪ್ರಯತ್ನಿಸಿದರೆ ಯಶಸ್ಸು ನಮ್ಮ ಕೈಯಲ್ಲಿ: ಗುರುರಾಜ್ ಸನಿಲ್

Date:

ಉಡುಪಿ, ನ.11: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ,
ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಹಕಾರದಲ್ಲಿ ದಿ| ಪುಳಿಮಾರು ಎಂ. ಕೃಷ್ಣ ಶೆಟ್ಟಿ ದತ್ತಿ ಉಪನ್ಯಾಸ ಕಾರ್ಯಕ್ರಮ ಶನಿವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಪ್ರಸಿದ್ಧ ಉರಗ ತಜ್ಞ, ಸಾಹಿತಿ ಗುರುರಾಜ್ ಸನಿಲ್ ಮಾತನಾಡುತ್ತಾ, ಹಾವುಗಳ ಬಗ್ಗೆ ಬಹಳಷ್ಟು ತಪ್ಪು ನಂಬಿಕೆಗಳಿದ್ದು, ಅದನ್ನು ಹೋಗಲಾಡಿಸದಿದ್ದರೆ ಅದರ ಅಡ್ಡ ಪರಿಣಾಮ ಪರಿಸರ ಮತ್ತು ನಮ್ಮ ಮೇಲಾಗುವ ಸಾಧ್ಯತೆ ಇರುತ್ತದೆ ಎಂದರು. ಭಯವನ್ನು ಗೆಲ್ಲಲಿಕ್ಕೆ ಪ್ರಯತ್ನಿಸಿದರೆ ಖಂಡಿತ ಯಶಸ್ಸು ಸಾಧ್ಯ ತಮ್ಮ ಜೀವನದಲ್ಲಿ ಪ್ರಾರಂಭದಿಂದಲೇ ಭಯವನ್ನು ಹೋಗಲಾಡಿಸಿಕೊಳ್ಳಲು ಪ್ರಯತ್ನಿಸಬೇಕು ಎಂಬ ಕಿವಿಮಾತನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾಸ್ಕರ್ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಆಡಿಗ, ಕೋಶಾಧಿಕಾರಿ ವಿ ಮನೋಹರ್, ದತ್ತಿ ದಾನಿಗಳಾದ ಭವಾನಿ ವಿ. ಶೆಟ್ಟಿ, ಶಾರದಾ ಶೆಟ್ಟಿ, ಕಲಾ ವಿಭಾಗದ ಡೀನ್ ಡಾ. ನಿಕೇತನ, ಉಪನ್ಯಾಸಕರಾದ ಸೋಜನ್ ಕೆ. ಜಿ., ಎನ್.ಎಸ್.ಎಸ್ ಸಂಚಾಲಕರಾದ ವಿದ್ಯಾಕುಮಾರಿ ಉಪಸ್ಥಿತರಿದ್ದರು. ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್. ಪಿ ಪ್ರಸ್ತಾವಿಕ ಮಾತನಾಡಿ ಸ್ವಾಗತಿಸಿದರು. ರಾಘವೇಂದ್ರ ಪ್ರಭು ಕರ್ವಾಲು ಪರಿಚಯಿಸಿದರು. ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!