Friday, September 20, 2024
Friday, September 20, 2024

ಇರವಿನ ಬಗೆಗಿನ ನಿಜವಾದ ಅರಿವೇ ಓದು: ಪ್ರೊ. ಶಿವರಾಮ ಶೆಟ್ಟಿ

ಇರವಿನ ಬಗೆಗಿನ ನಿಜವಾದ ಅರಿವೇ ಓದು: ಪ್ರೊ. ಶಿವರಾಮ ಶೆಟ್ಟಿ

Date:

ಮಲ್ಪೆ, ನ.29: ನಾವು ಬದುಕುತ್ತಿರುವ ಸಮಾಜದ ನಡುವಿನ ನಮ್ಮ ಇರವನ್ನು ಅರಿವಿಗೆ ತರುವಂತಿರುವ ಓದು ಮಾತ್ರವೇ ನಾವು ಬದುಕುತ್ತಿರುವ ಸಮಾಜದ ಸರಿಯಾದ ತಿಳುವಳಿಕೆಯನ್ನು ಮೂಡಿಸಬಲ್ಲದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರೂ, ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಸಂಸ್ಥೆ, ಮೈಸೂರು ಇದರ ನಿಕಟಪೂರ್ವ ಯೋಜನಾ ನಿರ್ದೇಶಕರಾದ ಪ್ರೊ. ಬಿ. ಶಿವರಾಮ ಶೆಟ್ಟಿಯವರು ಹೇಳಿದರು. ಅವರು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗವು ಆಯೋಜಿಸಿದ ಹಳೆಗನ್ನಡ ಕಾವ್ಯದ ಓದಿನ ಕಮ್ಮಟವಾದ ‘ಕಬ್ಬದುಳುಮೆ’ಯನ್ನು ಉದ್ಘಾಟಿಸಿ ಮಾತನಾಡಿದರು.

೨೦೨೩ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರೂ, ಚಳುವಳಿಗಳ ಸಂಗಾತಿಯೂ ಎನಿಸಿದ ಚಿಂತಕ ಲಕ್ಷ್ಮೀಪತಿ ಕೋಲಾರ ಅವರು ಉಪಸ್ಥಿತರಿದ್ದು, ಕಾಲೇಜು ವತಿಯಿಂದ ಸನ್ಮಾನವನ್ನು ಸ್ವೀಕರಿಸಿ ಶುಭ ಹಾರೈಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಜಯಪ್ರಕಾಶ್ ಶೆಟ್ಟಿ ಹೆಚ್. ಪ್ರಾಸ್ತಾವಿಕವಾಗಿ ಮಾತನಾಡಿ, ಕಬ್ಬದುಳುಮೆಯ ಕಾರ್ಯಯೋಜನೆಯ ಸ್ವರೂಪವನ್ನು ಪರಿಚಯಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ವಹಿಸಿದ್ದರು. ತೆಂಕನಿಡಿಯೂರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಹಾಗೂ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರತ್ನಮಾಲಾ ಉಪಸ್ಥಿತರಿದ್ದರು. ರತ್ನಾಕರ ವರ್ಣಿಯ ಭರತೇಶ ವೈಭವದ ಸ್ತುತಿ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಉಪನ್ಯಾಸಕಿ ಶರಿತಾ ವಂದಿಸಿ, ಸಹ ಪ್ರಾಧ್ಯಪಕರಾದ ರಾಧಾಕೃಷ್ಣ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!