Tuesday, November 26, 2024
Tuesday, November 26, 2024

ಮನೆಮನೆಗಳಲ್ಲಿ ಗಮಕ ಕಲೆ ಪ್ರಸ್ತುತಗೊಳ್ಳಬೇಕು: ಎ.ಎಸ್.ಎನ್ ಹೆಬ್ಬಾರ್

ಮನೆಮನೆಗಳಲ್ಲಿ ಗಮಕ ಕಲೆ ಪ್ರಸ್ತುತಗೊಳ್ಳಬೇಕು: ಎ.ಎಸ್.ಎನ್ ಹೆಬ್ಬಾರ್

Date:

ಕುಂದಾಪುರ, ಡಿ.1: ಪುರಾಣ ಹಾಗೂ ಆಧುನಿಕ ಕಾವ್ಯಗಳ ಸುಲಭ ಅರ್ಥೈಸುವಿಕೆಗೆ ಗಮಕ ಕಲೆ ಪೂರಕವಾದುದು. ಕಾವ್ಯಗಳಲ್ಲಿನ ಸಾಂದರ್ಭಿಕವಾದ ಸಾಹಿತ್ಯ ಶ್ರೀಮಂತಿಕೆಗೆ ರಸಬದ್ಧವಾದ ರಾಗಗಳ ಸಂಯೋಜನೆಯಿಂದ ಶೋತೃಗಳಿಗೆ ಹೃದ್ಯವಾಗುತ್ತದೆ. ಮನೆಮನೆಗಳಲ್ಲಿ ಗಮಕ ಕಲೆ ಪ್ರಸ್ತುತಗೊಳ್ಳಬೇಕು ಯುವ ಮನಸುಗಳನ್ನು ಅರಳಿಸಬೇಕು ಎಂದು ಕುಂದಾಪುರದ ಖ್ಯಾತ ನ್ಯಾಯವಾದಿ ಎ ಎಸ್ ಎನ್ ಹೆಬ್ಬಾರ್ ಅವರು ಅಭಿಪ್ರಾಯಪಟ್ಟರು. ಅವರು ಕುಂದಾಪುರದ ‘ನುಡಿ’ ಯಲ್ಲಿ ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಮತ್ತು ಕರ್ನಾಟಕ ಗಮಕ ಕಲಾ ಪರಿಷತ್ತು ಕುಂದಾಪುರ ಘಟಕ ಇವರ ಸಹಯೋಗದಲ್ಲಿ ಕನಕ ಜಯಂತಿಯ ಪ್ರಯುಕ್ತ ಹಮ್ಮಿಕೊಂಡಿದ್ದ ಕನಕದಾಸ ಕೀರ್ತನೆಗಳ ಗಾಯನ ಮತ್ತು ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗಮಕಿಯಾಗಿ ಮಂಜುಳಾ ಸುಬ್ರಹ್ಮಣ್ಯ ಮಂಚಿ ಹಾಗೂ ವ್ಯಾಖ್ಯಾನಕಾರರಾಗಿ ಸಂಸ್ಕೃತ ವಿದ್ವಾಂಸರಾದ ಡಾ. ರಾಘವೇಂದ್ರ ರಾವ್ ಪಡುಬಿದ್ರೆ, ದ.ರಾ ಬೇಂದ್ರೆಯವರ ಮೇಘದೂತ ಕಾವ್ಯ ಭಾಗವನ್ನು ಪ್ರಸ್ತುತ ಪಡಿಸಿದರು.

ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಮಾರ್ ಕೆಮ್ಮಣ್ಣು ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ಸುಧಾ ಹೆಬ್ಬಾರ್ ಉಪಸ್ಥಿತರಿದ್ದರು. ಉಡುಪಿ ತಾಲೂಕು ಗಮಕ ಕಲಾಪರಿಷತ್ ಅಧ್ಯಕ್ಷರಾದ ಎಂ.ಎಲ್ ಸಾಮಗ ಸ್ವಾಗತಿಸಿದರು. ಗಮಕ ಕಲಾ ಪರಿಷತ್ ಕುಂದಾಪುರ ಘಟಕದ ಅಧ್ಯಕ್ಷರಾದ ಎಚ್ ಸುಜಯೀಂದ್ರ ಹಂದೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ವಿಶ್ವನಾಥ ಕರಬ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!