Thursday, September 19, 2024
Thursday, September 19, 2024

ಉಡುಪಿ ನಗರಸಭೆ ಉಪಚುನಾವಣೆಯ ವೇಳಾಪಟ್ಟಿ ಪ್ರಕಟ

ಉಡುಪಿ ನಗರಸಭೆ ಉಪಚುನಾವಣೆಯ ವೇಳಾಪಟ್ಟಿ ಪ್ರಕಟ

Date:

ಉಡುಪಿ, ಡಿ.8: ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ – 2023 ಕ್ಕೆ ಸಂಬಂಧಿಸಿದಂತೆ, ಉಡುಪಿ ನಗರಸಭೆಯ 13 ನೇ ಮೂಡುಪೆರಂಪಳ್ಳಿ ವಾರ್ಡಿನ ಸಾಮಾನ್ಯ ಮಹಿಳೆ ಮೀಸಲಾತಿ ಸದಸ್ಯ ಸ್ಥಾನಕ್ಕೆ ಉಪಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ನಿಗದಿಪಡಿಸಿ, ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿರುತ್ತದೆ. ನಾಮಪತ್ರಗಳನ್ನು ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಡಿ. 16 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಡಿ. 18 ಕೊನೆಯ ದಿನವಾಗಿದೆ. ಡಿ. 27 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ರ ವರೆಗೆ ಮತದಾನ ನಡೆಯಲಿದ್ದು, ಮರು ಮತದಾನದ ಅವಶ್ಯವಿದ್ದಲ್ಲಿ ಡಿ. 29 ರಂದು ನಡೆಸಲಾಗುವುದು. ಡಿ. 30 ರಂದು ತಾಲೂಕು ಕೇಂದ್ರ ಸ್ಥಳದಲ್ಲಿ ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಕಾರ್ಯವು ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಮ್ಮು ಕಾಶ್ಮೀರ: ಮೊದಲ ಹಂತದ ಮತದಾನ ಮುಕ್ತಾಯ; 35 ವರ್ಷಗಳಲ್ಲೇ ಅತಿ ಹೆಚ್ಚು ಮತದಾನ

ನವದೆಹಲಿ, ಸೆ.18: ಜಮ್ಮು ಮತ್ತು ಕಾಶ್ಮೀರವು ಕಳೆದ 35 ವರ್ಷಗಳಲ್ಲಿ ಅತಿ...

ಅತಿ ಉದ್ದದ ಮಾನವ ಸರಪಳಿ ನಿರ್ಮಾಣ- ಉಡುಪಿ ಜಿಲ್ಲೆ ಪ್ರಥಮ

ಬೆಂಗಳೂರು, ಸೆ.18: ಮಾನವ ಸರಪಳಿ ಕಾರ್ಯಕ್ರಮದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ...

ಗ್ರಾಮ ಪಂಚಾಯತ್ ಗಳಲ್ಲಿ ಸೌರ ಬೀದಿ ದೀಪಗಳ ಅಳವಡಿಕೆ

ಬೆಂಗಳೂರು, ಸೆ.18: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ...

ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ: ಸಾಮಾನ್ಯ ಸಭೆ

ಉಡುಪಿ, ಸೆ.18: ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ...
error: Content is protected !!