Friday, October 18, 2024
Friday, October 18, 2024

ಕಲ್ಯಾಣಪುರ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ; ಪದಗ್ರಹಣ

ಕಲ್ಯಾಣಪುರ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ; ಪದಗ್ರಹಣ

Date:

ಉಡುಪಿ, ಡಿ. 11: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಉಡುಪಿ ತಾಲೂಕು, ಉಡುಪಿ ತಾಲೂಕು ಜನಜಾಗ್ರತಿ ವೇದಿಕೆ ಹಾಗೂ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಅಂಬಾಗಿಲು ವಲಯ ಉಡುಪಿ ಹಾಗು ಶ್ರೀ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗೇಶ್ವರ ದೇವಸ್ಥಾನ ಕಲ್ಯಾಣಪುರ ಸಂತೆಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಜಿಲ್ಲೆ  ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು ಕಾರ್ಯಕ್ರಮ ಉದ್ಘಾಟಿಸಿ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ನೆರವೇರಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ಶಾಸಕ ಯಶ್ಪಾಲ್ ಸುವರ್ಣ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜುನಾಥ್ ಜಿ ಕೋಟ್ಯಾನ್ ವಹಿಸಿದ್ದರು. ಅಲೆವೂರಿನ ಪುರೋಹಿತರಾದ ವೇ. ಮೂ. ನರಸಿಂಹಮೂರ್ತಿ, ತಾಲೂಕು ಜನಜಾಗ್ರತಿ ವೇದಿಕೆ ಉಡುಪಿ ಅಧ್ಯಕ್ಷರಾದ ಸತ್ಯಾನಂದ ನಾಯಕ್, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ್ ಕುಂದರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷರಾದ ಜನಾರ್ದನ ತೋನ್ಸೆ, ಆಡಳಿತ ಮೊಕ್ತೇಸರ ಜ್ಯೋತಿಪ್ರಸಾದ್ ಶೆಟ್ಟಿಗಾರ್, ಜನಜಾಗ್ರತಿ ವೇದಿಕೆ ಅಂಬಾಗಿಲು ವಲಯಾಧ್ಯಕ್ಷ ಹರೀಶ್ ಕೋಟ್ಯಾನ್, ಪ್ರಸಾದ್ ರಾವ್ ಸುಬ್ರಹ್ಮಣ್ಯನಗರ, ಶ್ರೀ ಮೂಕಾಂಬಿಕಾ ಪಾಲಿಪ್ರಾಡಕ್ಟ್ ಕೊಡಂಕೂರು ಮಾಲಕ ಸಿದ್ದರಾಜು, ಟ್ಯಾಕ್ಸಿ ಮ್ಯಾಕ್ಸಿಕ್ಯಾಬ್ ಅಸೋಸಿಯೆಷನ್ ಜಿಲ್ಲಾ ಉಪಾಧ್ಯಕ್ಷ ಸತೀಶ ನಾಯಕ್, ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಂ., ಪ್ರಗತಿಬಂಧು ಒಕ್ಕೂಟಗಳ ನಿಕಟಪೂರ್ವ ಹಾಗೂ ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮೇಲ್ವಿಚಾರಕಿ ಪವಿತ್ರ ವರದಿ ಮಂಡಿಸಿದರು. ಭಾಸ್ಕರ್ ಸ್ವಾಗತಿಸಿ, ಶಕುಂತಲ ವಂದಿಸಿದರು. ರಾಧಾ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!