ಮಣಿಪಾಲ, ಡಿ.12: ಕೆ.ಎಂ.ಸಿ. ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದದಲ್ಲಿ ವಿಭಾಗ ಮುಖ್ಯಸ್ಥರಾದ ಡಾ. ಅಶ್ವಿನಿ ಕುಮಾರ್ ಹಾಗೂ ಡಾ. ಚೈತ್ರ ಆರ್. ರಾವ್ ಅವರ ಮಾರ್ಗದರ್ಶನದಲ್ಲಿ ‘ಆತ್ಮಹತ್ಯೆಯನ್ನು ತಡೆಗಟ್ಟುವ ಕ್ರಮಗಳು ಹಾಗೂ ಇದರಲ್ಲಿ ಸಮುದಾಯದ ಮಧ್ಯಸ್ಥಗಾರರ ಪಾತ್ರ’ ಎನ್ನುವ ವಿಷಯದ ಕುರಿತು ಕಾರ್ಯಗಾರ ನಡೆಯಿತು. ಕೆ.ಎಂ.ಸಿ. ಮಣಿಪಾಲದ ಮನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ರಾಜೇಶ್ ಕೃಷ್ಣ ಭಂಡಾರಿ ಹಾಗೂ ಪ್ರವೀಣ್ ಪಿ. ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾರ್ಗದರ್ಶನ ನೀಡಿದರು.
ಉಡುಪಿ ನಗರಸಭೆಯ ಸದಸ್ಯರು, ವಿವಿಧ ಗ್ರಾಮ ಪಂಚಾಯತ್ ಸದಸ್ಯರು, ಸಮಾಜ ಸೇವಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸೇರಿದಂತೆ ಸುಮಾರು 90 ಮಂದಿ ಭಾಗವಹಿಸಿದರು. ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಕಿರು ನಾಟಕ ಪ್ರದರ್ಶಿಸಲಾಯಿತು. ಸಾಮಾಜಿಕ ಕಾರ್ಯಕರ್ತೆ ನೀಲಾವತಿ ಕಾರ್ಯಕ್ರಮ ನಿರೂಪಿಸಿದರು. ಸಾಮಾಜಿಕ ಕಾರ್ಯಕರ್ತ ಮಹೇಶ್ ಹಾಗೂ ಹೆಲ್ತ್ ಇನ್ಸ್ಪೆಕ್ಟರ್ ನವೀನ ಕಾರ್ಯಕ್ರಮ ನಿರ್ವಹಿಸಿದರು. ಸಮುದಾಯ ವೈದ್ಯಕೀಯ ವಿಭಾಗದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.